
Featured StoryUdupi
ಮಹಜರು ಸಂದರ್ಭದಲ್ಲಿ ನಡೆದ ಘಟನೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ದೂರು ದಾಖಲು
ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನೇಜಾರಿನಲ್ಲಿ ಇಂದು ಮಹಜರು ಪ್ರಕ್ರಿಯೆ ನಡೆಸುವ ವೇಳೆ ನಡೆದ ಘಟನೆಗೆ ಸಂಬಂಧಿಸಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ.
ಅಕ್ರಮ ಕೂಟ ಸೇರಿ ಗಲಭೆಗೆ ಯತ್ನಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಐಪಿಸಿ 143, 147, 341, 186, 149 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.




