ನೇಜಾರು ಕೊಲೆ ಪ್ರಕರಣ: ಆರೋಪಿಯನ್ನು ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸುವ ಸಾಧ್ಯತೆ?

ಉಡುಪಿ: ನೇಜಾರಿನ ತಾಯಿ ಮತ್ತು ಮಕ್ಕಳ ಕೊಲೆಯ ಆರೋಪಿ ಪ್ರವೀಣ್ ಚೌಗಲೆಯನ್ನು ಉಡುಪಿ ಜಿಲ್ಲಾ ನ್ಯಾಯಾಲಯದಿಂದ ಕೇಂದ್ರ ಕಾರಾಗೃಹಕ್ಕೆ ಕಳುಹಿಸುವ ಸಾಧ್ಯತೆ ಕಂಡು ಬರುತ್ತಿದೆ.

ಈ ಪ್ರಕರಣ ಇಡೀ ರಾಜ್ಯದಲ್ಲಿ ಸದ್ದು ಮಾಡಿತ್ತು. ಆರೋಪಿಯ ಭದ್ರತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ‌. ನ್ಯಾಯಾಲಯದಲ್ಲಿ ಈ ಕುರಿತು ಅನುಮತಿ ಪಡೆಯಲಾಗಿದೆ ಎನ್ನಲಾಗುತ್ತಿದ್ದು ಬಂಧಿಖಾನೆ ಅಧಿಕಾರಿಗಳ ಅನುಮತಿ ದೊರೆತ ಕೂಡಲೇ ಸ್ಥಳಾಂತರಿಸುವ ಸಾಧ್ಯತೆ ಇದೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸುವ ಸಾಧ್ಯತೆ ಹೆಚ್ಚು ಕಂಡು ಬರುತ್ತಿದೆ.

Latest Indian news

Popular Stories