ನವ ದಂಪತಿಯ ಜಗಳ ಪ್ರಕರಣ;ಗಂಭೀರ ಗಾಯಗೊಂಡಿದ್ದ ಪತಿಯೂ ಮೃತ್ಯು

ಕೋಲಾರ: ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿಯ ಮಧ್ಯೆ ನಡೆದಿದೆ ಎನ್ನಲಾದ ಹೊಡೆದಾಟ ಪ್ರಕರಣದಲ್ಲಿ ಗಾಯಗೊಂಡಿದ್ದ ವರ ನವೀನ್‌ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.ವಧು ಸ್ಥಳದಲ್ಲೆ ಗಂಬೀರ ಗಾಯಗೊಂಡು‌ ಮೃತಪಟ್ಟಿದ್ದಳು.

ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದ ನವೀನ್-‌ ಲಿಖಿತ ಇಬ್ಬರೂ ತಮ್ಮ ಮನೆಯವರನ್ನು ಒಪ್ಪಿಸಿ ಸರಳ ರೀತಿಯಲ್ಲಿ ಮದುವೆಯಾಗಿದ್ದರು. ಮದುವೆ ಶಾಸ್ತ್ರಗಳು ಮುಗಿದು ಕೋಣೆಗೆ ತೆರಳಿದ ದಂಪತಿ ಕೆಲ ಹೊತ್ತಿನ ನಂತರ ‌ಹೊಡೆದಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಮೂರನೇ ವ್ಯಕ್ತಿಯ ಕೈವಾಡ ಆರೋಪ:

ಕೋಲಾರ ಜಿಲ್ಲೆಯ ಕೆಜಿಎಫ್​​ ತಾಲೂಕಿನ ಚಂಬರಸನಹಳ್ಳಿಯಲ್ಲಿ ಮದುವೆಯಾದ ಕೆಲವೇ ಗಂಟೆಗಳಲ್ಲಿ ನವ ವಧು ಹಾಗೂ ವರ ಬಡಿದಾಡಿಕೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರನೇ ವ್ಯಕ್ತಿಯ ಕೈವಾಡ ಇರುವ ಬಗ್ಗೆ ವಧು ಲಿಖಿತಶ್ರೀ ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. ವಧು ಲಿಖಿತಶ್ರೀಯ ತಾತ ಹಾಗೂ ತಂಗಿ ಮೂರನೇ ವ್ಯಕ್ತಿಯ ಕೈವಾಡದ ಬಗ್ಗೆ ಆರೋಪ ಮಾಡಿದ್ದಾರೆ.

ಇಬ್ಬರೂ ಬಹಳಷ್ಟು ಅನ್ಯೋನ್ಯವಾಗಿದ್ದವರು, ಪ್ರೀತಿಸಿ ಮದುವೆಯಾಗಿದ್ದವರು. ಇಬ್ಬರು ಹೊಡರದಾಡಿಕೊಂಡಿರುವುದು ಅನುಮಾನ. ಯಾರೋ ಮೂರನೇ ವ್ಯಕ್ತಿ ಇದರ ಹಿಂದೆ ಇದ್ದಾರೆ ಎಂದು ನವ ವಧು ವರನ ಸಾವಿನ ಬಗ್ಗೆ ಲಿಖಿತಶ್ರೀ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.

ನಾವು ಮದುವೆಗೆ ಹೋಗಿದ್ದೆವು. ಇಬ್ಬರೂ ತುಂಬಾ ಖುಷಿಯಾಗಿ ಇದ್ದರು. ಅವರು ಹೊಡೆದಾಡಿಕೊಂಡಿರುವುದು ಸುಳ್ಳು. ಇಬ್ಬರನ್ನೂ ಯಾರೋ ಹೊಡೆದಿರುವ ಅನುಮಾನ ಇದೆ ಎಂದು ಲಿಖಿತಶ್ರೀ ತಂಗಿ ಅರ್ಚನಾ ಹಾಗೂ ತಾತ ವೆಂಕಟರಮಣಪ್ಪ ಅನುಮಾನ ವ್ಯಕ್ತಪಡಿಸಿದ್ದಾರೆ.

Latest Indian news

Popular Stories