ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ಹಣಕಾಸು ಸಚಿವರಾಗಿ ಸೀತಾರಾಮನ್ ಮಂಡಿಸಲಿರುವ 6ನೇ ಬಜೆಟ್ ಇದಾಗಿದೆ.
ಹಾಗೆಯೇ ಪ್ರಧಾನಿ ಮೋದಿ (Narendra Modi) ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್ ಕೂಡ ಇದಾಗಿರಲಿದೆ.
ಬಜೆಟ್ ಮಂಡನೆ ಬೆಳಗ್ಗೆ 11 ಗಂಟೆಗೆ ಶುರುವಾಗಲಿದೆ. ನಿರ್ಮಲಾ ಸೀತಾರಾಮನ್ ಅವರ ಬಜೆಟ್ ಭಾಷಣದ ನೇರ ಪ್ರಸಾರವನ್ನು ಡಿಡಿ ನ್ಯೂಸ್ನಲ್ಲಿ ವೀಕ್ಷಿಸಬಹುದಾಗಿದೆ.