ಜ್ಞಾನವಾಪಿ ಆವರಣದಲ್ಲಿ ಹಿಂದೂಗಳ ಪೂಜೆಗೆ ಸದ್ಯಕ್ಕಿಲ್ಲ ನಿರ್ಬಂಧ: ಅಲಹಾಬಾದ್ ಹೈಕೋರ್ಟ್

ವಾರಾಣಸಿಯ ಜ್ಞಾನವಾಪಿಯಲ್ಲಿ ಹಿಂದೂಗಳ ಪೂಜೆ ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ ಮಸೀದಿ ಸಮಿತಿಗೆ ಭಾರಿ ಹಿನ್ನಡೆಯಾಗಿದೆ. ಸದ್ಯಕ್ಕೆ ಹಿಂದೂಗಳ ಪೂಜೆಗೆ ತಡೆ ನೀಡಲಾಗದು ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದ್ದು, ಫೆಬ್ರವರಿ 6 ರ ವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿದೆ.

ಪ್ರಕರಣದ ಮುಂದಿನ ವಿಚಾರಣೆ ಫೆಬ್ರವರಿ 6 ರಂದು ನಡೆಯಲಿದೆ. ಅಲ್ಲಿಯವರೆಗೆ ಹಿಂದೂಗಳ ಪೂಜೆಗೆ ನಿಷೇಧವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಫೆಬ್ರವರಿ 6 ರಂದು ವಾರಣಾಸಿ ಜಿಲ್ಲಾ ನ್ಯಾಯಾಲಯದಲ್ಲಿ ಪುರಾತತ್ವ ಇಲಾಖೆಯ ಸಮೀಕ್ಷಾ (ಎಎಸ್‌ಐ) ವರದಿಯ ವಿಚಾರಣೆಯೂ ನಡೆಯಲಿದೆ. ಸದ್ಯದ ಮಟ್ಟಿಗೆ ಸ್ಥಳವನ್ನು ಸಂರಕ್ಷಿಸುವಂತೆ ಉತ್ತರ ಪ್ರದೇಶದ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಯಾವುದೇ ಹಾನಿ ಅಥವಾ ನಿರ್ಮಾಣ ಚಟುವಟಿಕೆ ನಡೆಯದಂತೆ ನೋಡಿಕೊಳ್ಳುವಂತೆಯೂ ಸರ್ಕಾರಕ್ಕೆ ಕೋರ್ಟ್​ ಸೂಚನೆ ನೀಡಿದೆ.

Latest Indian news

Popular Stories