ಕೇಜ್ರಿವಾಲ್​ಗೆ ಸದ್ಯಕ್ಕಿಲ್ಲ ಮಧ್ಯಂತರ ಜಾಮೀನು | ಮೇ 9ಕ್ಕೆ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ದೆಹಲಿ ಅಬಕಾರಿ ನೀತಿ (Delhi Liquor Case) ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ಗೆ ಸುಪ್ರೀಂ ಕೋರ್ಟ್​ನಿಂದ ರಿಲೀಫ್ ಸಿಕ್ಕಿಲ್ಲ.

ಮಂಗಳವಾರ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಕುರಿತು ಅರ್ಜಿಯನ್ನ ವಿಚಾರಣೆ ನಡೆಸಿದ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ಜಾರಿ ನಿರ್ದೇಶನಾಲಯ ತಮ್ಮನ್ನು ಬಂಧಿಸಿರುವುದನ್ನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿತ್ತು. ಸುಪ್ರೀಂ ಕೋರ್ಟ್ ನ್ಯಾಯದೀಶರಾದ ಸಂಜೀವ್ ಖನ್ನಾ ಹಾಗೂ ದೀಪಂಕರ್ ದತ್ತಾ ವಿಚಾರಣೆ ನಡೆಸಿದರು. ಎಎಪಿ ಅಧ್ಯಕ್ಷರ ಪರ ಅಭಿಷೇಕ್ ಸಿಂಘ್ವಿ ಹಾಗೂ ಇಡಿ ಪರ ಎಸ್​ವಿ ರಾಜು ವಾದ ಮಂಡಿಸಿದರು.

ಇಡಿ ಪರ ಎಸ್​ವಿ ರಾಜು ಮತ್ತು ಎಎಪಿ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ತಮ್ಮ ತಮ್ಮ ವಾದ ಮಂಡಿಸಿದರು. ಎರಡೂ ಕಡೆಯ ವಾದವನ್ನು ಆಲಿಸಿದ ಸುಪ್ರೀಂ ಕೋರ್ಟ್ ಅರವಿಂದ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ತೀರ್ಪನ್ನು ಕಾಯ್ದಿರಿಸಿದೆ. ಇದೀಗ ಮೇ 9 ರಂದು ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಲಿದೆ.

ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದರೂ ಅವರು ತಮ್ಮ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವುದು ಸಾಧ್ಯವಿಲ್ಲ. ಏಕೆಂದರೆ ಅದು ವ್ಯವಸ್ಥೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ಈ ನಡುವೆ ಅದು ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ. ಇದರಿಂದ ಕೇಜ್ರಿವಾಲ್ ಅವರಿಗೆ ಮತ್ತೆ ನಿರಾಶೆ ಎದುರಾಗಿದೆ.

ದಿಲ್ಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ತಮ್ಮನ್ನು ಬಂಧಿಸಿರುವ ಕ್ರಮದ ವಿರುದ್ಧ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಕೇಜ್ರಿವಾಲ್ ಅವರು ಹಾಲಿ ದಿಲ್ಲಿ ಸಿಎಂ ಆಗಿದ್ದಾರೆ ಮತ್ತು ಅವರು ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ನಡೆಸುವ ಅಗತ್ಯವಿದೆ. ಹೀಗಾಗಿ ಅವರ ಮಧ್ಯಂತರ ಜಾಮೀನು ಅರ್ಜಿಯ ವಾದ ವಿವಾದ ಆಲಿಸುವುದಾಗಿ ಜಾರಿ ನಿರ್ದೇಶನಾಲಯಕ್ಕೆ ತಿಳಿಸಿತು. ಬುಧವಾರ ವಿಚಾರಣೆಗೆ ಬಳಿಕ ತೀರ್ಪು ಕಾಯ್ದಿರಿಸಿದ್ದ ನ್ಯಾಯಾಲಯ, ಬಳಿಕ ಮಧ್ಯಂತರ ಆದೇಶವನ್ನು ಮುಂದೂಡಿತು. ಗುರುವಾರ ಅಥವಾ ಮುಂದಿನ ವಾರ ಇದು ಮತ್ತೆ ನ್ಯಾಯಪೀಠದ ಮುಂದೆ ಬರುವ ಸಾಧ್ಯತೆ ಇದೆ.

Latest Indian news

Popular Stories