ಮಂಗಳೂರು: ಜಿಲ್ಲೆಗೆ ಅನುದಾನ ತರುವಲ್ಲಿ ವಿಫಲವಾಗಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯವನ್ನು ಮಾಡಿಲ್ಲ ಎಂದು ಆರೋಪಿಸಿ ಎನ್ಎಸ್ ಯುಐ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ಮನೆಗೆ ಮುತ್ತಿಗೆ ಯತ್ನ ನಡೆಸಿದ್ದಾರೆ.
ಪ್ರತಿಭಟನಕರರನ್ನು ಪೊಲೀಸರು ತಡೆದಾಗ, ಕಾರ್ಯಕರ್ತರು ಬ್ಯಾರಿಕೇಡ್ ನೂಕಿ ಮುತ್ತಿಗೆ ಹಾಕುವ ಯತ್ನ ನಡೆಸಿದ್ದಾರೆ. ಆದರೆ ಪೊಲೀಸರು ಅದಕ್ಕೆ ಅವಕಾಶ ಕೊಡದೆ 20-25 ಮಂದಿ ಎನ್ಎಸ್ ಯುಐ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.