Featured StoryDakshina Kannada

ಸುಳ್ಯ: ನರ್ಸಿಂಗ್ ವಿದ್ಯಾರ್ಥಿನಿ ಹಠಾತ್ ಕುಸಿದು ಬಿದ್ದು ಮೃತ್ಯು

ಸುಳ್ಯ, ಜೂ.3: ತಾಲೂಕಿನ ಸುಬ್ರಹ್ಮಣ್ಯ ಸಮೀಪದ ರೆಂಜಿಲಾಡಿ ಎಂಬಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಹಠಾತ್ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ರೆಂಜಿಲಾಡಿಯ ನಿಡ್ಮೇರು ನಿವಾಸಿ ರವೀಂದ್ರ ಎಂಬವರ ಪುತ್ರಿ ರಶ್ಮಿತಾ ಎನ್ (19) ಈ ದುರಂತದಲ್ಲಿ ಪ್ರಾಣ ಕಳೆದುಕೊಂಡ ದುರ್ದೈವಿ.

ರಶ್ಮಿತಾ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ನರ್ಸಿಂಗ್ ಓದುತ್ತಿದ್ದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ವೈದ್ಯಕೀಯ ಪರೀಕ್ಷೆಯಲ್ಲಿ ಆಕೆಯ ಆರೋಗ್ಯದಲ್ಲಿ ಯಾವುದೇ ಅಸಹಜತೆ ಕಂಡುಬಂದಿಲ್ಲ ಎಂದು ಹೇಳಲಾಗಿದೆ. ಆದರೆ, ಜೂನ್ 1 ರಂದು ರಾತ್ರಿ ಇದ್ದಕ್ಕಿದ್ದಂತೆ ಮನೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ.

ರಶ್ಮಿತಾ ಪೋಷಕರು ಮತ್ತು ಸಹೋದರಿಯನ್ನು ಅಗಲಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button