ಊಟಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 6 ಕಾರ್ಮಿಕರು ಮೃತ್ಯು, ಓರ್ವ ನಾಪತ್ತೆ

ತಮಿಳುನಾಡು: ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಆರು ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಊಟಿಯಲ್ಲಿ ಬುಧವಾರ ಸಂಭವಿಸಿದೆ.

ಊಟಿಯ ಲವ್‌ಡೇಲ್ ಬಳಿ ಈ ದುರ್ಘಟನೆ ನಡೆದಿದ್ದು ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಓರ್ವ ಇನ್ನೂ ಅವಶೇಷಗಳಡಿ ಸಿಲುಕಿರುವುದಾಗಿ ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಗಂಭೀರ ಗಾಯಗೊಂಡವರನ್ನು ಊಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸ್ಥಳದಲ್ಲಿ ರಕ್ಷಣಾ ತಂಡದಿಂದ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Latest Indian news

Popular Stories