ಮಂಗಳೂರು: ಚುನಾವಣೆಯ ಸಂದರ್ಭದಲ್ಲಿ ಅಯೋಧ್ಯೆಯ ವಿಚಾರವನ್ನು ಮುಂದಿಟ್ಟು ರಾಜಕೀಯ ಮಾಡಲಾಗುತ್ತಿತ್ತು. ಆದರೆ ಚುನಾವಣೆಯಲ್ಲಿ ಅಯೋಧ್ಯೆಯ ಜನರೇ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ ಎಂದು ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆದರೆ ಅಯೋಧ್ಯೆಯ ಜನತೆ ಬಿಜೆಪಿಯನ್ನು ತಿರಸ್ಕರಿಸಿದರು. ಆದರೆ ಜಿಲ್ಲೆಯ ಜನತೆ ಇನ್ನೂ ಅಯೋಧ್ಯೆ ಅನ್ನುತ್ತಿದ್ದಾರೆ. ಆದ್ದರಿಂದ ಇಲ್ಲಿನವರು ಬುದ್ಧಿವಂತರೇ? ಎಂಬ ಪ್ರಶ್ನೆ ಎಲ್ಲರಲ್ಲಿ ಮೂಡಲಾರಂಭಿಸಿದೆ ಎಂದು ಹೇಳಿದರು.
ಚುನಾವಣೆಯಲ್ಲಿ ನನ್ನ ಸೋಲಿಗೆ ಯಾರನ್ನೂ ದೂಷಿಸುವುದಿಲ್ಲ. ಸೋಲಿನ ನೈತಿಕ ಹೊಣೆಯನ್ನು ನಾನೇ ಹೊರುತ್ತೇನೆ. ಆದರೆ ಇನ್ನು ಮುಂದೆ ಸುಮ್ಮನೆ ಕೂರೊದಿಲ್ಲ. ಎಲ್ಲಾ ಬೂತ್ ಗಳಿಗೆ ಹೋಗಿ ಮುಂದಿನ ಒಂದುವರೆ ವರ್ಷದಲ್ಲೇ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುತ್ತೇನೆ. ಒಳ್ಳೆಯ ಕೆಲಸ ಯಾರೂ ಮಾಡಿದರೂ ಅನುಕರಣೆ ಮಾಡಬೇಕು. ಆದ್ದರಿಂದ ಬಿಜೆಪಿಯ ಸಂಘಟನೆಯ ಮಾದರಿಯಲ್ಲೇ ಪಕ್ಷ ಬಲಿಷ್ಠ ಮಾಡುವ ಕಾರ್ಯ ಮಾಡಲಿದ್ದೇವೆ ಎಂದು ದ.ಕ.ಜಿಲ್ಲೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಕಾಂಗ್ರೆಸ್ ಪಕ್ಷ ಸಂಘಟನೆ ಸ್ವಲ್ಪ ದುರ್ಬಲವಾಗಿದ್ದು, ಮುಂದಿನ ಒಂದು ವರ್ಷದಲ್ಲಿ ಪಕ್ಷವನ್ನು ಸಂಘಟಿಸುವಲ್ಲಿ ಶಕ್ತಿಮೀರಿ ಪ್ರಯತ್ನಿಸುತ್ತೇನೆ. ಸಂಸದ ಬ್ರಿಜೇಶ್ ಚೌಟರಲ್ಲಿ ಹೇಳುವುದೇನೆಂದರೆ ತಾವು ಏನೇ ದ.ಕ.ಜಿಲ್ಲೆಯ ಅಭಿವೃದ್ಧಿಗೋಸ್ಕರ ಏನೇ ಕೆಲಸ ಮಾಡಿದರೂ ನಾನು ನಿಮ್ಮೊಂದಿಗೆ ಇರಲಿದ್ದೇನೆ. ಅದರೊಂದಿಗೆ ಜಿಲ್ಲೆಯ ಸಾಮರಸ್ಯ ಗತವೈಭವವನ್ನು ಮರಳಿ ತರುವಲ್ಲಿ ತಮ್ಮ ಸಹಕಾರವೂ ಅಗತ್ಯ ಎಂದು ಹೇಳಿದರು.