Featured StoryUdupi

ಪಡುಬಿದ್ರಿ: ಬಸ್ ಚಾಲಕನ ನಿಯಂತ್ರಣ ತಪ್ಪಿ ಪೋಲೀಸ್ ಬೂತ್’ಗೆ ಡಿಕ್ಕಿ – ಆಟೋ ಜಖಂ

ಪಡುಬಿದ್ರಿ : ಮಂಗಳೂರಿನಿಂದ ಕಾರ್ಕಳ ಹೋಗುವ ಎಕ್ಸ್ಪ್ರೆಸ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಾರ್ಕಳ
ಜಂಕ್ಷನ್ ನಲ್ಲಿದ್ದ ಪೊಲೀಸ್ ಬೂತ್ ಗೆ ಡಿಕ್ಕಿ ಹೊಡೆದು
ಅದನ್ನು ಸುಮಾರು ನೂರು ಅಡಿ ಎಳೆದೊಯ್ದು ರಿಕ್ಷಾ
ಸ್ಟ್ಯಾಂಡ್ ಗೆ ನುಗ್ಗಿ ಒಂದು ಆಟೋ ರಿಕ್ಷಾವನ್ನು ಸಂಪೂರ್ಣ
ಜಖಂಗೊಳಿಸಿದ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.

ಅದೃಷ್ಟವಶಾತ್ ಬಸ್ ಅಲ್ಲಿಗೆ ನಿಂತಿದ್ದರಿಂದ ಪ್ರಾಣ ಹಾನಿ ಸಂಭವಿಸಿಲ್ಲ . ಅಲ್ಲಿ ಬ್ಯಾಂಕ್ ಎಟಿಎಂ ಅಲ್ಲದೇ ಹಲವಾರು ಅಂಗಡಿಗಳಿದ್ದು ಜನನಿಬಿಡ ಪ್ರದೇಶವಾಗಿತ್ತು. ಹೈವೇ ಪಕ್ಕ ಅಪಘಾತ ಸಂಭವಿಸಿದ ಕಾರಣ ಸ್ವಲ್ಪ ಹೊತ್ತು ಟ್ರಾಫಿಕ್ ಜಾಮ್ ಆಗಿದೆ. ಪಡುಬಿದ್ರಿ ಠಾಣಾಧಿಕಾರಿ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಸುಗಮ ಸಂಚಾರ ಅನುವು ಮಾಡಿ ಕೊಟ್ಟಿದ್ದಾರೆ.

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button