ಪಡುಬಿದ್ರಿ: ಚಲಿಸುತ್ತಿದ್ದ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ -ಪ್ರಯಾಣಿಕರು ಪಾರು

ಪಡುಬಿದ್ರಿ: ಹೆಜಮಾಡಿ
ಟೋಲ್ ಗೇಟ್ ಬಳಿ ಕಳೆದ ರಾತ್ರಿ ತಡೆ ರಹಿತ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಟೋಲ್ ಸಿಬ್ಬಂದಿ ಸಾರ್ವಜನಿಕರೊಂದಿಗೆ ಸೇರಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಅಂತಿಮವಾಗಿ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಮೂಲಕ ಸಂಭಾವ್ಯ ಅವಘಢ ತಪ್ಪಿಸಿದ್ದಾರೆ.

ಉಡುಪಿ ಕಡೆಗೆ ಹೋಗುತ್ತಿದ್ದ ಮಂಜುನಾಥ ಹೆಸರಿನ ಖಾಸಗಿ ಬಸ್ಸಿನಲ್ಲಿ ಹೆಜಮಾಡಿಯ ಕಿರು ಟೋಲ್ ಗೇಟ್ ಬಳಿ ಬೆಂಕಿ
ಕಾಣಿಸಿಕೊಂಡಿತು. ತಕ್ಷಣ ಚಾಲಕನ ಗಮನಕ್ಕೆ ಬಂದು ಬಸ್ ನಿಲ್ಲಿಸಿ ಕಾರ್ಯಾಚರಿಸಲಾಯಿತು.ಬಸ್‌ನ ತಾಂತ್ರಿಕ ದೋಷವೇ ಈ ಅವಘಢಕ್ಕೆ ಕಾರಣ ಎನ್ನಲಾಗಿದೆ. ಯಾವುದೇ ಸಾವು ನೋವು ಸಂಭವಿಸಿಲ್ಲ.

Latest Indian news

Popular Stories