2022ರಲ್ಲಿ ಪಾಕಿಸ್ತಾನ್ ಪರ ಘೋಷಣೆ – ಮಂಡ್ಯ ಬಿಜೆಪಿ ಕಾರ್ಯಕರ್ತ ವಶಕ್ಕೆ

2022ರಲ್ಲಿ ಮಂಡ್ಯದಲ್ಲಿ (Mandya) ಬಿಜೆಪಿ ನಡೆಸಿದ ಪ್ರತಿಭಟನೆ ವೇಳೆ ಪಾಕ್‌ ಪರ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.

ಮಂಡ್ಯದ ಸಂಜಯ್ ವೃತ್ತದಲ್ಲಿ 2022ರ ಡಿಸೆಂಬರ್ 17 ರಂದು ಅಂದಿನ ಪಾಕ್‌ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀಡಿದ್ದ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿತ್ತು.

ಬಿಜೆಪಿ ಕಾರ್ಯಕರ್ತ ಪಾಕಿಸ್ತಾನ ಜಿಂದಾಬಾದ್‌ (Pakistan Zindabad) ಎಂದು ಘೋಷಣೆ ಕೂಗಿದ್ದ. ಕೂಡಲೇ ಎಚ್ಚೆತ್ತ ಕಾರ್ಯಕರ್ತರೊಬ್ಬರು ಘೋಷಣೆ ಕೂಗಿದ ಕಾರ್ಯಕರ್ತನ ಬಾಯಿ ಮುಚ್ಚಿಸಿದ್ದರು.

ವಿಧಾನಸೌಧದಲ್ಲಿ ಪಾಕ್‌ ಪರ ಘೋಷಣೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಕೈ ಕಾರ್ಯಕರ್ತರು ಬಂಧನಕ್ಕೆ ಒಳಗಾದ ಬೆನ್ನಲ್ಲೇ ಈಗ ಕಾಂಗ್ರೆಸ್‌ ಮಂಡ್ಯದ ಬಿಜೆಪಿ ಕಾರ್ಯಕರ್ತರ ಮೇಲೆ ದೂರು ನೀಡಿದೆ.

ಕನ್ನಂಬಾಡಿ ಕುಮಾರ್‌ ದೂರು ನೀಡಿದ್ದು ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 153 ಬಿ(ರಾಷ್ಟ್ರೀಯ ಸಮಗ್ರತೆ ಧಕ್ಕೆ ತರುವ ಹೇಳಿಕೆ) 505 (ಸಾರ್ವಜನಿಕ ಕೇಡಿಗೆ ಕಾರಣವಾಗುವ ಹೇಳಿಕೆ) ಆರೋಪದ ಮೇರೆಗೆ ಆರಾಧ್ಯ, ರವಿ ಮತ್ತು ಇತರರನ್ನು ಆರೋಪಿಗಳನ್ನಾಗಿ ಮಾಡಿ ಎಫ್‌ಐಆರ್‌ ದಾಖಲಾಗಿದೆ. ಪ್ರಕರಣ ದಾಖಲಾದ ಬೆನ್ನಲ್ಲೇ ಪೊಲೀಸರು ಬಿಜೆಪಿ ಕಾರ್ಯಕರ್ತ ರವಿಯನ್ನು ವಶಕ್ಕೆ ಪಡೆದಿದ್ದಾರೆ.

Latest Indian news

Popular Stories