ನವದೆಹಲಿ: ಬಿಜೆಪಿ-ಆರ್‍ಎಸ್‍ಎಸ್ ಅಜೆಂಡಾ ಪ್ರಕಾರ ಸಂವಿಧಾನಕ್ಕೆ ತಿದ್ದುಪಡಿ ತಂದರೆ ಸಂಸದೀಯ ಪ್ರಜಾಪ್ರಭುತ್ವ ಅಂತ್ಯವಾಗಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಅವರು ಸೋಮವಾರ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸಂವಿಧಾನವನ್ನು ತಿದ್ದುಪಡಿ ಮಾಡುವ ಬಿಜೆಪಿಯ ಉದ್ದೇಶವು ಎಂದಿಗೂ ರಹಸ್ಯವಾಗಿರಲಿಲ್ಲ. ಹತ್ತಾರು ಬಿಜೆಪಿ ನಾಯಕರು ಖಾಸಗಿ ಸಂಭಾಷಣೆಗಳಲ್ಲಿ ಭಾರತವು ಹಿಂದೂ ರಾಷ್ಟ್ರವಾಗಿರಬೇಕು, ಹಿಂದಿ ಭಾರತದ ಏಕೈಕ ಅಧಿಕೃತ ಭಾಷೆಯಾಗಬೇಕು ಎಂದು ಹೇಳಿದ್ದಾರೆ. ಆರ್‍ಎಸ್‍ಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಸಂವಿಧಾನವನ್ನು ತಿದ್ದುಪಡಿ ಮಾಡುವ ಕಲ್ಪನೆಯನ್ನು ಪೋಷಿಸುವುದನ್ನು ಮುಂದುವರೆಸಿದೆ ಎಂದು ಹೇಳಿದ್ದಾರೆ.
ಬಿಜೆಪಿ-ಆರ್‍ಎಸ್‍ಎಸ್ ಅಜೆಂಡಾ ಪ್ರಕಾರ ಸಂವಿಧಾನಕ್ಕೆ ತಿದ್ದುಪಡಿ ತಂದರೆ ಸಂಸದೀಯ ಪ್ರಜಾಪ್ರಭುತ್ವ, ಫೆಡರಲಿಸಂ, ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಇಂಗ್ಲಿಷ್ ಒಂದೇ ಆಗಿರುವುದು ಕೊನೆಗೊಳ್ಳುತ್ತದೆ.