ಸನಾತನ ಧರ್ಮ ಮಲೇರಿಯಾ, ಡೆಂಗ್ಯು ಇದ್ದಂತೆ ಸಮಾನತೆಯಿಲ್ಲ ಎಂಬ ತಮಿಳುನಾಡು ಸಚಿವರ ಹೇಳಿಕೆ ಖಂಡಿಸಿದ ಪೇಜಾವರ ಶ್ರೀ

ಮೈಸೂರು: ಸನಾತನ ಧರ್ಮ ಮಲೇರಿಯಾ, ಡೆಂಗ್ಯು ಇದ್ದಂತೆ ಅದನ್ನು ಬೇರು ಸಮೇತ ನಿರ್ಮೂಲನೆ ಮಾಡಬೇಕು’ ಎಂದು ತಮಿಳುನಾಡಿದ ಮುಖ್ಯಮಂತ್ರಿ ಸ್ಟಾಲಿನ್ ಪುತ್ರ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಖಂಡಿಸಿದ್ದಾರೆ.

ಮೈಸೂರಿನಲ್ಲಿ ಪೇಜಾವರ ಶ್ರೀ ಹೇಳಿಕೆಯನ್ನು ನೀಡಿದ್ದು, ಒಂದು ರಾಜ್ಯದ ಮಂತ್ರಿಯಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಉದಯನಿಧಿ ಸ್ಟಾಲಿನ್ ಅವರು ಸಮಾಜದಲ್ಲಿ ಇಂತಹ ವಿಷ ಬೀಜವನ್ನು ಬಿತ್ತುವುದು ಸರಿಯಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಸನಾತನ’ ಎಂದರೇ ಸದಾ ಕಾಲವೂ ಇರುವಂತಹದ್ದು ಎಂದರ್ಥ. ಎಲ್ಲರೂ ಸುಖವಾಗಿ ಬದುಕಲು ಅಳವಡಿಸಿಕೊ ಳ್ಳುವ ಸೂತ್ರವೇ ಧರ್ಮ. ನಮ್ಮ ಸುಖದಿಂದ ಅಕ್ಕಪಕ್ಕದವರಿಗೆ ದುಃಖವಾಗಬಾರದು. ಬದಲಾಗಿ ನಮ್ಮ ಸುಖದಿಂದ ಅಕ್ಕಪಕ್ಕದವರಿಗೂ ಸಂತೋಷ ಲಭಿಸಬೇಕು ಎನ್ನುತ್ತದೆ ಸನಾತನ ಧರ್ಮ. ಆದ್ದರಿಂದ ಅಂತಹ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎನ್ನುವ ಮನೋಪ್ರವೃತ್ತಿ ಸರಿಯಲ್ಲ, ಅದನ್ನು ಖಂಡಿಸುತ್ತೇವೆ ಎಂದು ಶ್ರೀಗಳು ಹೇಳಿದ್ದಾರೆ.

Latest Indian news

Popular Stories