ಪೆಟ್ರೋಲ್-ಡೀಸೆಲ್ ದರ ಇಳಿಕೆ, ಎಷ್ಟು ಗೊತ್ತಾ?

ನವದೆಹಲಿ, (ಮಾರ್ಚ್ 14): ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಪೆಟ್ರೋಲ್, ಡೀಸೆಲ್ (Petrol and Diesel) ದರ ಇಳಿಕೆಯಾಗಿದೆ. ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್​ಗೆ 2 ರೂಪಾಯಿ ಇಳಿಕೆಯಾಗಿದ್ದು, ಪರಿಷ್ಕೃತ ದರ ನಾಳೆ ಅಂದರೆ ಮಾರ್ಚ್ 15ರ ಬೆಳಗ್ಗೆ 6ರಿಂದ ಜಾರಿಗೆ ಬರಲಿದೆ ಎಂದು ವರದಿಯಾಗಿದೆ.

ಬೆಂಗಳೂರಿನಲ್ಲಿ ಇಂದು (ಮಾರ್ಚ್ 14) ಪ್ರತಿ ಲೀಟರ್ ಪೆಟ್ರೋಲ್ ದರ 101.94 ರೂಪಾಯಿ ಹಾಗೂ ಡೀಸೆಲ್ ಬೆಲೆ 87.89 ರೂಪಾಯಿ ಇದ್ದು. ನಾಳೆ(ಮಾರ್ಚ್ 15) ಬೆಳಗ್ಗೆಯಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ 2 ರೂಪಾಯಿ ಇಳಿಕೆಯಾಗಲಿದೆ. ಪೆಟ್ರೋಲ್ ಬೆಲೆ 99.94 ರೂಪಾಯಿ ಹಾಗೂ ಡೀಸೆಲ್ ಬೆಲೆ 85.89 ರೂಪಾಯಿಗೆ ಇಳಿಕೆ ಆಗಲಿದೆ.

Latest Indian news

Popular Stories