ಇಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ ಭೇಟಿ: ಕಲಬುರಗಿ ನಂತರ ಮಧ್ಯಾಹ್ನ ಬೆಂಗಳೂರಿಗೆ ಆಗಮನ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಶುಕ್ರವಾರ ಕರ್ನಾಟಕಕ್ಕೆ ಆಗಮಿಸುತ್ತಿದದಾರೆ. ಇಂದು ಬೆಳಗ್ಗೆ ಕಲಬುರಗಿಗೆ ಭೇಟಿ ನೀಡಿ ಅಲ್ಲಿಂದ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ತೆರಳಲಿದ್ದಾರೆ. ಅಲ್ಲಿಂದ ಮತ್ತೆ ಕಲಬುರಗಿಗೆ ಆಗಮಿಸಿ ಬಳಿಕ ಮಧ್ಯಾಹ್ನ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಈ ಹಿನ್ನೆಲೆ ಇಂದು ಬೆಳಗ್ಗೆಯಿಂದಲೇ ಮೋದಿಯವರು ಸಂಚರಿಸುವ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಕಲಬುರಗಿಯಿಂದ ಪ್ರಧಾನಿ ಮೋದಿ ಅವರು ಮಧ್ಯಾಹ್ನ 1.05 ಕ್ಕೆ ವಿಶೇಷ ವಿಮಾನದ ಮೂಲಕ 2.10ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲಪಲಿದ್ದಾರೆ. 2.15ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣನಿಂದ ರಸ್ತೆ ಮಾರ್ಗವಾಗಿ ದೇವನಹಳ್ಳಿ ತಾಲೂಕಿನ ಭಟ್ಟರ ಮಾರನಹಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ವಿಮಾನ ನಿಲ್ದಾಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ಸಂಚಾರವನ್ನು ಇಂದು ಬೆಳಗ್ಗೆ 8 ರಿಂದ ಸಂಜೆ 6 ಗಂಟೆ ವರೆಗೆ ನಿರ್ಬಂಧಿಸಲಾಗಿದೆ.

Latest Indian news

Popular Stories