ಅಮೆರಿಕಕ್ಕೆ ಪ್ರಯಾಣ ಬೆಳೆಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳವಾರ ಬೆಳಗಿನ ಜಾವ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಅಮೆರಿಕಕ್ಕೆ ಪ್ರಯಾಣಿಸುವ ಮುನ್ನ ಟ್ವೀಟ್ ಮಾಡಿರುವ ಅವರು, ಅಮೆರಿಕಕ್ಕೆ ಪ್ರಯಾಣ ಬೆಳೆಸುತ್ತಿದ್ದು ನ್ಯೂಯಾರ್ಕ್ ಸಿಟಿ ಮತ್ತು ವಾಷಿಂಗ್ಟನ್ ಡಿಸಿಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇನೆ.

ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ, ಅಮೆರಿಕ ಅಧ್ಯಕ್ಷ ಜೋ ಬೈಡನ್ ಜೊತೆಗೆ ಮಾತುಕತೆ, ಯುಎಸ್ ಕಾಂಗ್ರೆಸ್ ನ ಜಂಟಿ ಸದನ ಉದ್ದೇಶಿಸಿ ಮಾತುಕತೆ ಹೀಗೆ ಇನ್ನೂ ಅನೇಕ ಕಾರ್ಯಕ್ರಮಗಳು ಭೇಟಿಯ ಸಂದರ್ಭದಲ್ಲಿ ಇವೆ ಎಂದರು.

ಪ್ರಧಾನಿ ಮೋದಿಯವರಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಅವರ ಪತ್ನಿ ಅಮೆರಿಕದ ಪ್ರಥಮ ಮಹಿಳೆ ಜಿಲ್ಲ್ ಬೈಡನ್ ಆಹ್ವಾನ ನೀಡಿದ್ದರು. ಅಮೆರಿಕ ಪ್ರವಾಸದ ಮೊದಲ ಭಾಗವಾಗಿ ನಾಳೆ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ವಿಶ್ವಸಂಸ್ಥೆ ಕೇಂದ್ರ ಕಚೇರಿಯಿರುವ ನ್ಯೂಯಾರ್ಕ್ ನಗರದಲ್ಲಿ ಮೊದಲ ಕಾರ್ಯಕ್ರಮದಲ್ಲಿ ಪ್ರಧಾನಿಗಳು ಪಾಲ್ಗೊಳ್ಳಲಿದ್ದಾರೆ.

Latest Indian news

Popular Stories