ಹೋರಾಟಕ್ಕೆ ಬೆಂಬಲಿಸಲು ತೆರಳುತ್ತಿದ್ದ ಪೊಲೀಸ್ ಮಹಾ ಸಂಘದ ರಾಜ್ಯಾಧ್ಯಕ್ಷ ಪೊಲೀಸ್ ವಶ

ಕುಣಿಗಲ್ : ಚಿಕ್ಕಮಗಳೂರಿನಲ್ಲಿ ನಡೆಯುತ್ತಿರುವ ಪೊಲೀಸರ ಪ್ರತಿಭಟನೆಗೆ ಬೆಂಬಲಿಸಲು ತೆರಳುತ್ತಿದ್ದ ಪೊಲೀಸ್ ಮಹಾ ಸಂಘದ ರಾಜ್ಯಾಧ್ಯಕ್ಷ ಶಶೀಧರ್ ಅವರನ್ನು ಕುಣಿಗಲ್ ಪೊಲೀಸರು ರಾಷ್ಟ್ರೀಯ ಹೆದ್ದಾರಿ 75 ಅಂಚೇಪಾಳ್ಯ ಬಳಿ ಡಿ.3ರ ಭಾನುವಾರ ವಶಕ್ಕೆ ಪಡೆದಿದ್ದಾರೆ.

ಹೆಲ್ಮೆಟ್ ಧರಿಸದ ವಕೀಲನ ಮೇಲೆ ಹಲ್ಲೆಗೆ ಸಂಬಂಧಿಸಿ ಆರು ಮಂದಿ ಸಿಬ್ಬಂದಿ ಅಮಾನತು ಮಾಡಿರುವುದನ್ನು ಖಂಡಿಸಿ ಬೀದಿಗಳಿದು ಹೋರಾಟ ಮಾಡುತ್ತಿರುವ ಚಿಕ್ಕಮಂಗಳೂರು ಪೊಲೀಸರಿಗೆ ಬೆಂಬಲ ಸೂಚಿಸಲು ಬೆಂಗಳೂರಿನಿಂದ ಚಿಕ್ಕಮಂಗಳೂರಿಗೆ ತೆರಳುತ್ತಿದ್ದ ಪೊಲೀಸ್ ಮಹಾ ಸಂಘದ ರಾಜ್ಯಾಧ್ಯಕ್ಷರನ್ನು ಕುಣಿಗಲ್ ತಾಲೂಕು ಅಂಚೇಪಾಳ್ಯದ ಸಮೀಪ ಸಿಪಿಐ ನವೀನ್ ಗೌಡ ನೇತೃತ್ವದ ಪೊಲೀಸ್ ತಂಡ ವಶಕ್ಕೆ ಪಡೆದು ಗೌಪ್ಯ ಸ್ಥಳದಲ್ಲಿ ಇರಿಸಿದ್ದಾರೆ.

Latest Indian news

Popular Stories