ಲೈಂಗಿಕ ದೌರ್ಜನ್ಯ ಪ್ರಕರಣ: ಉಪಕಾರ ಮಾಡಿದರೆ ಈಗ ನನ್ನ ಮೇಲೆಯೇ ಹೀಗೆ ಆರೋಪ ಮಾಡಿದ್ದಾರೆ – ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ

ಬೆಂಗಳೂರು, ಮಾರ್ಚ್​​ 15: ಲೈಂಗಿಕ ದೌರ್ಜನ್ಯ ಆರೋಪದ ವಿಚಾರವಾಗಿ ದಾಖಲಾಗಿರುವ ಎಫ್​ಐಆರ್​ ಬಗ್ಗೆ ಮಾಜಿ ಸಿಎಂ, ಬಿಜೆಪಿ ನಾಯಕ ಬಿಎಸ್​ ಯಡಿಯೂರಪ್ಪ (BS Yediyurappa) ಪ್ರತಿಕ್ರಿಯೆ ನೀಡಿದ್ದು, ನ್ಯಾಯ ಕೊಡಿಸಿ ಎಂದು ಬಂದಿದ್ದ ಅಮ್ಮ, ಮಗಳು ಹಲವು ಸಲ ನನ್ನ ಬಳಿ ಬಂದಿದ್ದರು ಎಂದಿದ್ದಾರೆ.

ತಾಯಿ-ಮಗಳು ಅನೇಕ ಸಲ ಇಲ್ಲಿಗೆ ಬಂದು ಹೋಗಿದ್ದರು. ಅನ್ಯಾಯ ಆಗಿದೆ ಎಂದು ನನ್ನ ಬಳಿ ಬಂದಿದ್ದರು. ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದರು. ಅದಾದ ಮೇಲೆ ನನ್ನ ವಿರುದ್ಧ ಏನೇನೋ ಮಾತನಾಡಿದರು. ಬಳಿಕ ಅವರನ್ನ ಕಮಿಷನರ್​ ಬಳಿ ಕಳಿಸಿಕೊಟ್ಟೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಉಪಕಾರ ಮಾಡಿದರೆ ಈಗ ನನ್ನ ಮೇಲೆಯೇ ಹೀಗೆ ಆರೋಪ ಮಾಡಿದ್ದಾರೆ. ಯಾರೋ ಒಬ್ಬ ಹೆಣ್ಣು ಮಗಳು ದೂರು ಕೊಟ್ಟಿದ್ದಾರೆ. ಇರಲಿ ಎದುರಿಸೋಣ. ನಾನು ಈ ಕುರಿತು ಹೆಚ್ಚು ಮಾತನಾಡಲು ಇಷ್ಟಪಡುವುದಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.

Latest Indian news

Popular Stories