ಮಹಾ ದುರಂತ: ಉತ್ತರಾಖಂಡದಲ್ಲಿ ಸೇತುವೆಯೊಂದರ ರೈಲಿಂಗ್‌ಗೆ ವಿದ್ಯುತ್ ಪ್ರವಹಿಸಿ 16 ಮಂದಿ ಮೃತ್ಯು

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಸೇತುವೆಯೊಂದರ ರೈಲಿಂಗ್‌ಗೆ ವಿದ್ಯುತ್ ಪ್ರವಹಿಸಿದ ಪರಿಣಾಮ ಓರ್ವ ಪೊಲೀಸ್ ಮತ್ತು ಮೂವರು ಗೃಹ ರಕ್ಷಕರು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದು, ಶೀಘ್ರದಲ್ಲೇ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
ನಮಾಮಿ ಗಂಗೆ ಯೋಜನೆಯಡಿ ಒಳಚರಂಡಿ ಸಂಸ್ಕರಣಾ ಘಟಕದ ಭಾಗವಾಗಿರುವ ಈ ಸೇತುವೆಯು ಚಮೋಲಿ ಜಿಲ್ಲೆಯ ಪಿಪಲ್ಕೋಟಿ ಗ್ರಾಮದ ಬಳಿ ಅಲಕನಂದಾ ನದಿಯನ್ನು ವ್ಯಾಪಿಸಿದೆ.

ಕಳೆದ ರಾತ್ರಿ ಈ ಘಟನೆ ನಡೆದಿದೆ ಎಂದು ಚಮೋಲಿ ಪೊಲೀಸ್ ವರಿಷ್ಠಾಧಿಕಾರಿ ಪ್ರಮೇಂದ್ರ ದೋಭಾಲ್ ಹೇಳಿದ್ದಾರೆ.
“ಸೆಕ್ಯುರಿಟಿ ಗಾರ್ಡ್ ವಿದ್ಯುತ್ ಆಘಾತದಿಂದ ಸಾವನ್ನಪ್ಪಿದ್ದಾರೆ ಎಂದು ನಮಗೆ ಕರೆ ಬಂದಿತು. ಪೊಲೀಸ್ ಸಿಬ್ಬಂದಿ ಪಂಚನಾಮ (ಸ್ಥಳ ತಪಾಸಣೆ) ಗಾಗಿ ಗ್ರಾಮಸ್ಥರೊಂದಿಗೆ ಹೋದಾಗ 22 ಜನರು ವಿದ್ಯುತ್ ಸ್ಪರ್ಶಿಸಿ ತೀವ್ರ ಗಾಯಗೊಂಡರು. ಆಸ್ಪತ್ರೆಯಲ್ಲಿ 15 ಜನರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಂಭೀರರಾಗಿದ್ದಾರೆ.

ದುಃಖವನ್ನು ವ್ಯಕ್ತಪಡಿಸಿದ ಮುಖ್ಯಮಂತ್ರಿ ಧಾಮಿ, “ಚಮೋಲಿ ಜಿಲ್ಲೆಯಿಂದ ಒ<ಂದು ದುಃಖದ ಸುದ್ದಿಯೊಂದನ್ನು ಕೇಳಿದೆ. ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ರಕ್ಷಣಾ ತಂಡಗಳು ಸ್ಥಳದಲ್ಲಿವೆ. ಗಾಯಾಳುಗಳನ್ನು ದೊಡ್ಡ ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ಹೆಲಿಕಾಪ್ಟರ್‌ಗಳನ್ನು ಒದಗಿಸಲಾಗಿದೆ.

ಘಟನೆಯಲ್ಲಿ ಗಾಯಗೊಂಡಿದ್ದ ಏಳು ಮಂದಿಯನ್ನು ಈಗ ಹೆಲಿಕಾಪ್ಟರ್ ಮೂಲಕ ರಿಷಿಕೇಶದಲ್ಲಿರುವ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ಗೆ (ಎಐಐಎಂಎಸ್) ಸ್ಥಳಾಂತರಿಸಲಾಗಿದೆ. ಘಟನೆಯ ಕಾರಣವನ್ನು ತಿಳಿಯಲು ತನಿಖೆ ನಡೆಯುತ್ತಿದೆ ಎಂದು ಸಹಾಯಕ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ವಿ ಮುರುಗೇಶನ್ ಹೇಳಿದ್ದಾರೆ.


ನಮಾಮಿ ಗಂಗೆ ಯೋಜನೆಯು ಗಂಗಾನದಿಯ ಮಾಲಿನ್ಯವನ್ನು ತಡೆಗಟ್ಟಲು ಮತ್ತು ನದಿಯನ್ನು ಪುನರುಜ್ಜೀವನಗೊಳಿಸಲು ಸಮಗ್ರ ಸಂರಕ್ಷಣಾ ಮಿಷನ್ ಆಗಿದೆ.

Latest Indian news

Popular Stories