ಸಿದ್ದರಾಮಯ್ಯ ಬಜೆಟ್ ಮಂಡನೆಗಿಂತ ಬಿಜೆಪಿಗೆ ಬೈಯ್ದಿದ್ದೇ ಹೆಚ್ಚು – ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಸಿದ್ದರಾಮಯ್ಯ ಬಜೆಟ್ ಮಂಡನೆಗಿಂತ ಬಿಜೆಪಿಗೆ ಬೈಯ್ದಿದ್ದೇ ಹೆಚ್ಚು. ದೇಶದಲ್ಲಿ ಕೊವಿಡ್ ವ್ಯಾಕ್ಸಿನ್ ತಯಾರಿಸಿ ಎಲ್ಲರಿಗೂ ನೀಡಿದ್ದೇವೆ. ವಿದೇಶಗಳಿಗೂ ಕೊಟ್ಟಿದ್ದನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡುತ್ತಾರೆ. ಸಿದ್ದರಾಮಯ್ಯ ಭಾರತ ದ್ವೇಷಿ ರಾಹುಲ್ ಗಾಂಧಿ ರೀತಿ ಮಾತನಾಡುತ್ತಿದ್ದಾರೆ.

ಆಸ್ತಿ ದರ ಏರಿಕೆ ಮಾಡಿದ್ದಾರೆ, ಅಬಕಾರಿ ಟಾರ್ಗೆಟ್ ಕೊಟ್ಟಿದ್ದಾರೆ. ಎಲ್ಲರಿಗೂ ಮದ್ಯಪಾನ ಮಾಡಿಸಿ ಹಣ ತಂದುಕೊಡಿ ಅನ್ನುತ್ತಾರೆ.  ಎನ್​​ಇಪಿಗೆ ಮೊದಲು ಕಾಂಗ್ರೆಸ್ ಒಪ್ಪಿಗೆ ನೀಡಿತ್ತು ಆದರೆ ಇವತ್ತು ಕೈ ಬಿಟ್ಟಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ಮಾಡಿದ್ದಾರೆ.

Latest Indian news

Popular Stories