ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್; ಸಂಸದ ಸ್ಥಾನದಿಂದ ಅನರ್ಹ

ಹಾಸನ ಲೋಕಸಭಾ ಕ್ಷೇತ್ರದ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಹೈಕೋರ್ಟ್ ಆದೇಶಿಸಿದೆ.

ದೂರು ದಾಖಲಿಸಿದ್ದ ದೇವರಾಜೇಗೌಡ: ವಕೀಲ ಹಾಗೂ ಕೆಡಿಪಿ ಮಾಜಿ ಸದಸ್ಯ ಜಿ.ದೇವರಾಜೇಗೌಡ ಅವರು, ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಆಸ್ತಿ ವಿವರವನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣ ಪತ್ರವನ್ನು ಸಲ್ಲಿಸಿದ್ದಾರೆ ಎಂದು ಆರೋಪಿಸಿ ಏ.26, 2019ರಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಪ್ರಜ್ವಲ್‌ ರೇವಣ್ಣ ಪ್ರಮಾಣ ಪತ್ರದಲ್ಲಿ ಹಲವಾರು ಸುಳ್ಳು ಮಾಹಿತಿಗಳನ್ನು ನೀಡಿದ್ದು ಅವರ ನಾಮಪತ್ರ ರದ್ದುಗೊಳಿಸಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕೂಲಂಕುಷವಾಗಿ ಪರಿಶೀಲಿಸಿ ವಿವರವಾದ ವರದಿ ಸಲ್ಲಿಸುವಂತೆ ರಾಜ್ಯ ಚುನಾವಣಾ ಆಯೋಗವು ಹಾಸನ ಜಿಲ್ಲಾ ಚುನಾವಣಾಧಿಕಾರಿಗೆ ಸೂಚನೆ ನೀಡಿತ್ತು.

2019ರಲ್ಲಿ ಪಜ್ವಲ್ ಆಸ್ತಿ ವಿವರ: 2019ರ ಲೋಕಸಭೆ ಚುನಾವಣೆಗೆ ಪ್ರಜ್ವಲ್ ತಮ್ಮ ಆಸ್ತಿ  ವಿವರ ಸಲ್ಲಿಕೆ ಮಾಡಿದ್ದರು. ಈ ವೇಳೆ ಪ್ರಜ್ವಲ್‌ ಒಟ್ಟು ಆಸ್ತಿ .8,13,622 ಆಗಿದ್ದು, ಇದರಲ್ಲಿ .4,89,15,029 ಮೌಲ್ಯದ ಸ್ಥಿರಾಸ್ತಿ, .1,68,86,632 ಮೌಲ್ಯದ ಚರಾಸ್ತಿಗಳೂ ಸೇರಿವೆ. ಇಷ್ಟೇ ಅಲ್ಲದೆ, ಪ್ರಜ್ವಲ್‌ ಅವರು .3.72 ಕೋಟಿ ಖಾಸಗಿ ಸಾಲವನ್ನೂ ಮಾಡಿಕೊಂಡಿದ್ದಾರೆ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ತಂದೆ ರೇವಣ್ಣ, ತಾಯಿ ಭವಾನಿ, ಅನಸೂಯ, ಸಿ.ಎನ್‌. ಪಾಂಡು, ಸಿ.ಎನ್‌. ಪುಟ್ಟಸ್ವಾಮಿಗೌಡ, ಜಯರಾಂ, ಡಿ.ಕೆ.ನಾಗರಾಜ್‌, ಕಾಳೇಗೌಡ, ಬೋರೇಗೌಡ, ಶೈಲ ಅವರಿಂದ ಈ ಸಾಲ ಪಡೆದಿದ್ದಾರೆ. ಪ್ರಜ್ವಲ್‌ ಹೆಸರಲ್ಲಿ ಒಟ್ಟು 36 ಎಕರೆ ಕೃಷಿ ಭೂಮಿಯೂ ಇದೆ. ಜತೆಗೆ, ಪ್ರಜ್ವಲ್‌ ಹೆಸರಿನಲ್ಲಿರುವ ಬ್ಯಾಂಕ್‌ ಖಾತೆಗಳಲ್ಲಿ ಒಟ್ಟು .15.58 ಲಕ್ಷ ನಗದೂ ಇದೆ. ಒಟ್ಟು .37.31 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನೂ ಅವರು ಹೊಂದಿದ್ದಾರೆ. 18 ಹಸುಗಳು, 2 ಎತ್ತುಗಳನ್ನೂ ಪ್ರಜ್ವಲ್‌ ಸಾಕಿಕೊಂಡಿದ್ದಾರೆ. ಅಪರಾಧ ಪ್ರಕರಣಗಳಿಗೆ ಸಂಬಂಧಿಸಿ ಪೊಲೀಸ್‌ ಠಾಣೆಯಲ್ಲಿ ಪ್ರಜ್ವಲ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿಲ್ಲ.

Latest Indian news

Popular Stories