ಪ್ರಜ್ವಲ್ ಕೇಸ್ ‘ವಿಶ್ವದ ಅತಿ ದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣ’; ನೂರಾರು ಹಿಂದು ಮಹಿಳೆಯರ ಮಾಂಗಲ್ಯ ಹರಣ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣ ವಿಶ್ವದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣವಾಗಿದ್ದು, ನೂರಾರು ಹಿಂದು ಮಹಿಳೆಯರ ಮಾಂಗಲ್ಯ ಹರಣ ಮಾಡಿದ ಪ್ರಕರಣ ಎಂದು ಸಚಿವ ಕೃಷ್ಣಬೈರೇಗೌಡ ಅವರು ಬುಧವಾರ ಹೇಳಿದ್ದಾರೆ.

ಜೆಡಿಎಸ್‌ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ನಾಯಕ ಜಿ ದೇವರಾಜೇಗೌಡ ಅವರ ಸರಣಿ ಆರೋಪಗಳ ನಂತರ ಇಂದು ಕಾಂಗ್ರೆಸ್ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ನಾಲ್ವರು ಸಚಿವರು ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ನನ್ನ ಜ್ಞಾನದ ಪ್ರಕಾರ, ಪ್ರಜ್ವಲ್ ರೇವಣ್ಣ ಪ್ರಕರಣ ಪ್ರಪಂಚದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣವಾಗಿದ್ದು, ಇದರ ಬಗ್ಗೆ ಚರ್ಚೆಯಾಗಬೇಕು. ಮಹಿಳೆಯರ ಮಾನದ ಬಗ್ಗೆ ಮಾತನಾಡಬೇಕಾಗಿತ್ತು. ಆದರೆ ಬೇರೆಯದೆ ವಿಚಾರ ಚರ್ಚೆ ಆಗುತ್ತಿದೆ. ಗಮನ ಬೇರೆಡೆ ಸೆಳೆದು ಹಗರಣವನ್ನು ಮುಚ್ಚಿಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಆರೋಪಿಸಿದರು.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ಜೊತೆ ರಾಸಲೀಲೆ ನಡೆಸಿದ ವಿಡಿಯೋ ತುಣುಕುಗಳ ಪೆನ್ ಡ್ರೈವ್‌ ವಿತರಣೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಪಾತ್ರವಿದೆ ಎಂದು ಜೆಡಿಎಸ್ ಮತ್ತು ಬಿಜೆಪಿ ನಾಯಕರು ಆರೋಪಿಸಿದ ನಂತರ, ಕೃಷ್ಣ ಬೈರೇಗೌಡ, ರಾಮಲಿಂಗಾರೆಡ್ಡಿ, ಎನ್ ಚೆಲುವರಾಯಸ್ವಾಮಿ ಮತ್ತು ಎಂಸಿ ಸುಧಾಕರ್ ಅವರನ್ನು ಪಕ್ಷ ಮತ್ತು ಸರ್ಕಾರವನ್ನು ರಕ್ಷಿಸಲು ಡಿಕೆಶಿ ಕಣಕ್ಕಿಳಿಸಿದ್ದಾರೆ.

ಪ್ರಕರಣದ ತನಿಖೆಗೆ ಕಾಂಗ್ರೆಸ್ ಸರ್ಕಾರ ವಿಶೇಷ ತನಿಖಾ ತಂಡವನ್ನುಎಸ್‌ಐಟಿ) ರಚಿಸಿದ್ದರೆ, ಬಿಜೆಪಿ ಮತ್ತು ಜೆಡಿ(ಎಸ್) ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಮತ್ತು ಹಿಂದೆ ಇರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

‘ಇಷ್ಟೊಂದು ಹಿಂದೂ ಮಹಿಳೆಯರ ಮಾಂಗಲ್ಯವನ್ನು ಕಿತ್ತುಕೊಂಡು, ಕುಟುಂಬಗಳನ್ನು ಒಡೆದು ಹಾಕಿದ ಮತ್ತೊಂದು ಪ್ರಕರಣ ಇದ್ದರೆ ತಿಳಿಸಿ’ ಎಂದ ಕೃಷ್ಣ ಬೈರೇಗೌಡ, “ಇದು ಪ್ರಮುಖ ಪ್ರಕರಣವಾಗಿದೆ. ಆರೋಪಗಳ ಬಗ್ಗೆ ತನಿಖೆ ಮಾಡಬೇಕು, ಸಂತ್ರಸ್ತರಿಗೆ ನ್ಯಾಯ ಸಿಗಬೇಕು ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಇದು ನಮ್ಮ ಉದ್ದೇಶ ಎಂದರು.

“ಆದರೆ ನಡೆಯುತ್ತಿರುವ ಚರ್ಚೆಯ ದಿಕ್ಕನ್ನು ನೋಡಿದರೆ, ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣದ” ಆರೋಪಿಗಳನ್ನು ರಕ್ಷಿಸಲು ಯತ್ಮಿಸಲಾಗುತ್ತಿದೆ ಮತ್ತು ಪ್ರಕರಣವನ್ನು ಮುಚ್ಚಿಹಾಕಲು “ಯೋಜಿತ ಪ್ರಯತ್ನ” ಮತ್ತು “ಸರ್ಜಿಕಲ್ ಸ್ಟ್ರೈಕ್” ನಡೆಯುತ್ತಿದೆ ಎಂದು ಆರೋಪಿಸಿದರು.

Latest Indian news

Popular Stories