ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಜ್ವಲ್ ರೇವಣ್ಣ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು. ಆದ್ರೆ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇಂದು (ಜೂನ್ 26) ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ.
ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊದಲನೇ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು. ಈ ಅರ್ಜಿ ವಿಚಾರಣೆ ನಡೆಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಜಾಮೀನು ಆದೇಶವನ್ನು ಕಾಯ್ದಿಸಿತ್ತು. ಆದ್ರೆ, ಇಂದು ವಿಶೇಷ ಕೋರ್ಟ್‌ನ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ಪ್ರಜ್ವಲ್ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಾಮೀನಿನ ನಿರೀಕ್ಷೆಯಲ್ಲಿದ್ದ ಪ್ರಜ್ವಲ್ ರೇವಣ್ಣಗೆ ನಿರಾಸೆಯಾಗಿದೆ. ಇನ್ನು ಜಾಮೀನಿಗಾಗಿ ಪ್ರಜ್ವಲ್ ಹೈಕೋರ್ಟ್ ಮೆಟ್ಟಿಲೇರಬೇಕಿದೆ.