ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಬಂಧನ ಹಾಗೂ ಪೆನ್ ಡ್ರೈವ್ ಹಂಚಿಕೆ ಮಾಡಿರುವ ಆರೋಪಿಗಳನ್ನು ಬಂಧಿಸಿ ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ಹಾಸನದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ
ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಕಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದು ಆರೋಪಿಗಳನ್ನು ಕೂಡಲೇ ಬಂಧಿಸಿ ಮಹಿಳೆಯರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಯಾವುದೇ ಕಾರಣಕ್ಕೂ ಆರೋಪಿಗಳಿಗೆ ಜಾಮೀನು ಸಿಗಬಾರದು ಎಂದು ಆಗ್ರಹಿಸಿದ್ದಾರೆ.