ನೇಜಾರು ಕೊಲೆ ಪ್ರಕರಣ: ಆರೋಪಿ ಪ್ರವೀಣ್ ಚೌಗಲೆ ಬೆಂಗಳೂರಿನ ಪರಪ್ಪನ‌ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್

ಉಡುಪಿ: ಸುರಕ್ಷತೆ ದೃಷ್ಟಿಯಿಂದ ನೇಜಾರಿನ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯನ್ನು ಉಡುಪಿಯ ಹಿರಿಯಡ್ಕ ಜೈಲಿನಿಂದ ಬೆಂಗಳೂರಿನ ಪರಪ್ಪನ‌ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಇಂದು ಶಿಫ್ಟ್ ಮಾಡಲಾಗಿದೆ.

ನ.22ರಿಂದ ಹಿರಿಯಡ್ಕ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಪ್ರವೀಣ್ ಚೌಗುಲೆಯನ್ನು ಸುರಕ್ಷತೆಯ ಹಿನ್ನೆಲೆಯಲ್ಲಿ ಪ್ರತ್ಯೇಕ ಸೆಲ್ ಮತ್ತು ವಿಶೇಷ ಭದ್ರತೆಯೊಂದಿಗೆ ಇರಿಸಲಾಗಿತ್ತು. ಜಿಲ್ಲಾ ಕಾರಾಗೃಹದಲ್ಲಿನ ಭದ್ರತೆ ಕೊರತೆಯ ಹಿನ್ನೆಲೆಯಲ್ಲಿ ಆತನನ್ನು ಬೇರೆ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಜೈಲಾಧಿಕಾರಿಗಳು ಉಡುಪಿ ನ್ಯಾಯಾಲಯದಿಂದ ಅನುಮತಿಯನ್ನು ಪಡೆದುಕೊಂಡಿದ್ದರು.

ಇದೀಗ ಬಂಧಿಖಾನೆ ಇಲಾಖೆಯ ಮೇಲಾಧಿಕಾರಿಗಳ ಅನುಮತಿಯಂತೆ ಆತನನ್ನು ಇಂದು ಬೆಳಗ್ಗೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಬೆಂಗಳೂರಿನ ಕಾರಾಗೃಹಕ್ಕೆ ಸ್ಥಳಾಂತರಿಸಲಾಯಿತು

Latest Indian news

Popular Stories