ಭಾರತದ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಕಾರು ಅಪಘಾತ

ಮೀರತ್‌: ಭಾರತದ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಕಾರು ರಸ್ತೆ ಅಪಘಾತಕ್ಕೀಡಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಜು. 4 ರ ಮಂಗಳವಾರ ರಾತ್ರಿ 10 ಗಂಟೆಯ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಪ್ರವೀಣ್ ಕುಮಾರ್ ಹಾಗೂ ಅವರೊಂದಿಗೆ ಪ್ರಯಾಣಿಸುತ್ತಿದ್ದ ಅವರ ಪುತ್ರ ಅಪಾಯದಿಂದ ಪಾರಾಗಿದ್ದಾರೆ. ಉತ್ತರ ಪ್ರದೇಶದ ಮೀರತ್‌ ನಲ್ಲಿರುವ ತಮ್ಮ ಮನೆಗೆ ಮರಳುವ ವೇಳೆ ವೇಗವಾಗಿ ಬಂದ ಟ್ರಕ್‌ ಕಾರಿಗೆ ಢಿಕ್ಕಿ ಹೊಡದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ.

ಟ್ರಕ್ ಚಾಲಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಪ್ರವೀಣ್ ಕುಮಾರ್ ಕಾರು ಅಪಘಾತಕ್ಕೀಡಾಗಿರುವುದು ಇದು ಎರಡನೇ ಬಾರಿ. 2007 ರಲ್ಲಿ ಜೀಪ್‌ನಿಂದ ಅವರು ಬಿದ್ದಿದ್ದರು.

ಭಾರತದ ಪರ 6ಟೆಸ್ಟ್‌,68 ಏಕದಿನ ಹಾಗೂ 10ಟಿ-20 ಪಂದ್ಯಗಳನ್ನು ಆಡಿದ್ದಾರೆ. ಹಾಗೆಯೇ 119 ಐಪಿಎಲ್‌ ಪಂದ್ಯಗಳಲ್ಲೂ ಆಡಿದ್ದಾರೆ. 2007-08ರಲ್ಲಿ ಆಸ್ಟ್ರೇಲಿಯಾದಲ್ಲಿ ಭಾರತ ಸಿಬಿ ಸರಣಿಯನ್ನು ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

Latest Indian news

Popular Stories