ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ, ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆಯ ಮಾತು ಎಂದು ಆರಗ ಜ್ಞಾನೇಂದ್ರ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಕುರಿತು ಮಾತನಾಡಿದ ಅವಹೇಳನಕಾರಿ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.
ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ದಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ ಎಂದಿದ್ದಾರೆ.
ಶತಶತಮಾನಗಳಿಂದ ವರ್ಣಾಶ್ರಮದ ಹೆಸರಲ್ಲಿ ಶೋಷಣೆ ನಡೆಸಿ ಶ್ರಮಜೀವಿಗಳ ಬೆವರಿನಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು, ಸ್ವಾಭಿಮಾನದಿಂದ ದುಡಿದು ತಿನ್ನುವವರ ಮೈ ಬಿಸಿಲಲ್ಲಿ ಸುಟ್ಟಿರುತ್ತದೆ.
ಆರಗ ಜ್ಞಾನೇಂದ್ರ ಅವರು ಒಂದೇ ಒಂದು ದಿನ ಮಣ್ಣು ಹೊತ್ತರೆ ಅವರ ಮೈಬಣ್ಣವೂ ಕಪ್ಪಗಾಗುತ್ತದೆ.
ಮನುಸ್ಮೃತಿಯ ವರ್ಣಾಶ್ರಮವನ್ನು ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿಗೆ ದಲಿತರ ರಾಜಕೀಯ ಏಳಿಗೆಯ ಬಗ್ಗೆ ತೀವ್ರ ಅಸಹನೆ ಇರುವುದು ಇಂತಹ ಮಾತುಗಳಿಂದ ಹೊರಬರುತ್ತವೆ.
ಬಿಜೆಪಿಯಯ ಈ ಅಸಹನೆ ಬಿಜೆಪಿಯನ್ನೇ ಸುಟ್ಟು ಕರಕಲು ಮಾಡುತ್ತದೆ, ಏಕೆಂದರೆ ಇದು ಮನುಸ್ಮೃತಿಯ ಕಾಲವಲ್ಲ, ಬಾಬಾ ಸಾಹೇಬರ ಸಂವಿಧಾನದ ಕಾಲ ಎಂದು ಹೇಳಿದ್ದಾರೆ.