“ಗೇಮ್ ಚೇಂಜರ್ಸ್” ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕೇವಲ “ನೇಮ್ ಚೇಂಜರ್ಸ್” ಆಗಿದೆ – ಪ್ರಿಯಾಂಕ್ ಖರ್ಗೆ

“ಗೇಮ್ ಚೇಂಜರ್ಸ್” ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕೇವಲ “ನೇಮ್ ಚೇಂಜರ್ಸ್” ಆಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

2014ರ ಮೊದಲು ಅಮೇರಿಕಾ, ಬ್ರಿಟನ್, ರಷ್ಯಾಗಳಂತಹ ಮುಂದುವರೆದ ದೇಶಗಳೊಂದಿಗೆ ಭಾರತದ ಸ್ಪರ್ಧೆ ಇತ್ತು. ಈಗ ಗುಜರಾತ್ ಮಾಡೆಲ್, ಯುಪಿ ಮಾಡೆಲ್ ಹೆಸರಲ್ಲಿ ಜಾತಿ ಜನಾಂಗಗಳ ನಡುವೆ ದ್ವೇಷ ಬಿತ್ತಿ “ಮಣಿಪುರ್ ಮಾಡೆಲ್” ಸೃಷ್ಟಿಸಿದ್ದಾರೆ.

ಯಕಶ್ಚಿತ್ ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾಗಳೊಂದಿಗೆ ಭಾರತವನ್ನು ತುಲನೆ ಮಾಡಿಕೊಂಡು ಬೆನ್ನುತಟ್ಟಿಕೊಳ್ಳುವ ಪರಿಸ್ಥಿತಿಗೆ ತಂದಿಟ್ಟಿರುವ ಬಿಜೆಪಿಯಿಂದ ಹೆಸರುಗಳ ಬದಲಾವಣೆಗಳನ್ನಲ್ಲದೆ ಬೇರೆ ಇನ್ನೇನು ನಿರೀಕ್ಷಿಸಲು ಸಾಧ್ಯ? ಸಮರ್ಥ ಆಡಳಿತಗಾರರು ಭಾರತದಲ್ಲಿ ಬದಲಾವಣೆ ತರುತ್ತಾರೆಯೇ ಹೊರತು ಭಾರತದ ಹೆಸರಿನ ಬದಲಾವಣೆಯನ್ನಲ್ಲ ಎಂದರು.

Latest Indian news

Popular Stories