Featured StoryDakshina Kannada

ಮಂಗಳೂರು | ‘ಪ್ರಚಾರ’ ಮೋದಿಯಿಂದ ಕಲಿಯಬೇಕು: ಪ್ರಿಯಾಂಕ್ ಖರ್ಗೆ

ಮಂಗಳೂರು: ಕಾಂಗ್ರೆಸ್ ತನ್ನ ಅಧಿಕಾರವಧಿಯ ಸಂದರ್ಭದಲ್ಲಿ ಜನಪಯೋಗಿ ಯೋಜನೆಗಳನ್ನು ಜಾರಿಗೆ ತಂದಿದೆ. ಆ ಯೋಜನೆಗಳ ಪ್ರಯೋಜನ ಪಡೆದು ಆರ್ಥಿಕ, ಶೈಕ್ಷಣಿಕವಾಗಿ ಅದೆಷ್ಟೊ ಮಂದಿ ಸಬಲರಾಗಿದ್ದಾರೆ. ಆದರೆ ಕಾಂಗ್ರೆಸ್ ಇದ್ಯಾವುದರ ಪ್ರಚಾರ ಪಡೆದುಕೊಂಡಿಲ್ಲ. ಪ್ರಚಾರ ಪಡೆಯುವುದನ್ನು ನರೇಂದ್ರ ಮೋದಿ ಅವರಿಂದ ಕಲಿಯಬೇಕಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಮಂಗಳೂರಿನ ಪುರಭವನದಲ್ಲಿ ಇಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಪಂಚಾಯತ್ ರಾಜ್ ಪ್ರತಿನಿಧಿಗಳ ಜಿಲ್ಲಾ ಸಮಾವೇಶಕ್ಕೆ ಚಾಲನೆ ನೀಡಿ ಸಚಿವರು ಮಾತನಾಡುತ್ತಿದ್ದರು.

ರಾಜ್ಯ ಸರಕಾರದ ಸಹಭಾಗಿತ್ವದ ಅದೆಷ್ಟೋ ಯೋಜನೆಗಳಿವೆ. ಅವೆಲ್ಲದರ ಪ್ರಚಾರವನ್ನು ಮೋದಿ ಪಡೆಯುತ್ತಿದ್ದಾರೆ. ಜಲಜೀವನ್, ಉದ್ಯೋಗ ಖಾತ್ರಿ ಮೊದಲಾದ ಯೋಜನೆಗಳಲ್ಲಿ ಮೋದಿಯೇ ಪ್ರಚಾರ ಪಡೆದುಕೊಂಡಿದ್ದಾರೆ. ಆದರೆ ಈ ಯೋಜನೆಗಳಲ್ಲಿ ರಾಜ್ಯದ ಪಾಲೂ ಇದೆ. ಆದರೆ ಅದು ಪ್ರಚಾರದ ಕೊರತೆಯಿಂದ ಜನರಿಗೆ ಗೊತ್ತಾಗುತ್ತಿಲ್ಲ ಎಂದು ಅವರು ಹೇಳಿದರು.

ಬಿಜೆಪಿಯಿಂದಾಗಿ ಬಡ ಜನರು ಉದ್ದಾರ ಕನಸಿನ ಮಾತು. ಅವರು ಇರುವುದೇ ಸಂವಿಧಾನದ ಕಗ್ಗೊಲೆ ಮಾಡಲು. ತಳಸ್ಥರದ ಜನರು ಸ್ವಾಭಿಮಾನದ ಬದುಕು ನಡೆಸಲು ಕಾಂಗ್ರೆಸ್ ಕಾರಣ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಜಿಲ್ಲಾ ಪಂಚಾಯತ್ ಹಾಗೂ ಗ್ರಾಮ ಪಂಚಾಯತಿ ಸಭೆಗಳು ಸೇರಿದಂತೆ ಎಲ್ಲವನ್ನೂ ಪರಿಶೀಲಿಸಲು ಪಂಚತಂತ್ರ-2 ಎಂಬ ಹೊಸ ತಂತ್ರಜ್ಞಾನವನ್ನು ಆರಂಭಿಸುತ್ತಿದ್ದೇವೆ. ಈ ತಂತ್ರಜ್ಞಾನ ವ್ಯವಸ್ಥೆಯಿಂದ ಆಧುನಿಕತೆಗೆ ಒಗ್ಗಿಕೊಳ್ಳುವ ವ್ಯವಸ್ಥೆ ಆಗಲಿದೆ ಎಂದು ಅವರು ಹೇಳಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button