ಪ್ರಚೋದನಕಾರಿ ಹೇಳಿಕೆ: ಶರಣ್ ಪಂಪ್‌ವೆಲ್, ಪುನೀತ್ ಅತ್ತಾವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಈದ್ ಮೀಲಾದ್ ಮೆರವಣಿಗೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಂಘಪರಿವಾರದ ಶರಣ್ ಪಂಪ್‌ವೆಲ್ ಮತ್ತು ಪುನೀತ್ ಅತ್ತಾವರ ಅವರ ವಿರುದ್ಧ ಸೆನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.

ಕೋಮುಪ್ರಚೋದನಕಾರಿ ಹೇಳಿಕೆಗಳನ್ನು ನೀಡುವವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಸಿರುವ ಅವರು ಸಾಮಾಜಿಕ ಜಾಲತಾಣಗಳ ಮೇಲೆಯೂ ನಿಗಾ ವಹಿಸಲಾಗುತ್ತಿದೆ‌ ಎಂದು ತಿಳಿಸಿದ್ದಾರೆ.


ಅಲ್ಲದೇ ಈ ಸಲುವಾಗಿ ಇಬ್ಬರನ್ನೂ ಪೊಲೀಸರು ಮಂಡ್ಯದಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

Latest Indian news

Popular Stories