Featured StoryState News

ಕೋಮುಗಲಭೆಗೆ ಯತ್ನ; ಪುನೀತ್ ಕೆರೆಹಳ್ಳಿ ವಿರುದ್ಧ ಕಾಂಗ್ರೆಸ್​ನಿಂದ ದೂರು

ಬೆಂಗಳೂರು, ಜ.07: ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗವು ರಾಷ್ಟ್ರ ರಕ್ಷಣಾ ಪಡೆಯ ಪುನೀತ್​ ಕೆರೆಹಳ್ಳಿ ವಿರುದ್ಧ ಸೈಬರ್ ಕ್ರೈಂಗೆ (Bengaluru Cyber Crime) ದೂರು ನೀಡಿದೆ.

ರಾಷ್ಟ್ರ ರಕ್ಷಣಾ ಪಡೆ ವಾಟ್ಸಾಪ್ ಗ್ರೂಪ್​ನಲ್ಲಿ ಸಂದೇಶ ರವಾನಿಸುವ ಮೂಲಕ ಕೋಮುಗಲಭೆ ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಕಾಂಗ್ರೆಸ್, ಪುನೀತ್​ ಕೆರೆಹಳ್ಳಿ (Puneeth Kerehalli) ವಿರುದ್ಧ ದೂರು ದಾಖಲಿಸಿದೆ. ಹಾಗೂ ಕೂಡಲೆ ಕ್ರಮ ಆಗಬೇಕೆಂದು ಒತ್ತಾಯಿಸಿದೆ.

ಕೋಮುಗಲಭೆ ಸೃಷ್ಟಿಸುವ ಪ್ರಯತ್ನ ನಡೆದಿದೆ. ರಾಷ್ಟ್ರ ರಕ್ಷಣಾ ಪಡೆ ವಾಟ್ಸಾಪ್ ಗ್ರೂಪ್​ನಲ್ಲಿ ಸಂದೇಶ ಒಂದು ಹರಿದಾಡುತ್ತಿದೆ. ಕರ್ನಾಟಕದಲ್ಲಿ ಕೋಮುಗಲಭೆ ಎಬ್ಬಿಸೋದಕ್ಕೆ ಬಿಜೆಪಿ ಬೆಂಬಲ ಕೊಟ್ಟಿದೆ. ಆದುದರಿಂದ ಎಲ್ಲಾ ಕಾರ್ಯಕರ್ತರು ರೆಡಿಯಾಗಿ ಇರಿ. ಎಲ್ಲಿ ಏನು ಮಾಡಬೇಕು ಅಂತ ಈ ಗ್ರೂಪಿನ ಮೂಲಕ ಮಾಹಿತಿ ಕೊಡುತ್ತೇವೆ. ಜೈ ರಾಷ್ಟ್ರ ರಕ್ಷಣಾ ಪಡೆ 2024ಕ್ಕೆ ಮತ್ತೊಮ್ಮೆ ಮೋದಿ ಎಂಬ ಸಂದೇಶ ಹಾಕಿ ಕೋಮುಗಲಭೆಗೆ ಯತ್ನ ನಡೆಯುತ್ತಿದೆ ಎಂದು ಕಾಂಗ್ರೆಸ್ ದೂರು ನೀಡಿದೆ. ಇನ್ನು ವಾಟ್ಸಾಪ್ ಗ್ರೂಪ್​ನಲ್ಲಿ ಸಂದೇಶ ಹಾಕಿರುವ ನಂಬರ್ ಅನ್ನು ಟ್ರೂ ಕಾಲರ್​ನಲ್ಲಿ ಚೆಕ್ ಮಾಡಿದಾಗ ಪುನೀತ್ ಕೆರೆಹಳ್ಳಿ ನಂಬರ್ ಎಂದ ತಿಳಿದು ಬಂದಿದೆ. ಜನಾಂಗೀಯ ದ್ವೇಷ ಹುಟ್ಟಿಸುವ ಈತನನ್ನ ಬಂಧಿಸಬೇಕು. ಅದ್ಯಾವ ಬಿಜೆಪಿ ಮುಖಂಡ ಈತನಿಗೆ ಸುಪಾರಿ ಕೊಟ್ಟಿದ್ದಾನೆಂದು ತನಿಖೆ ಆಗಬೇಕು. ಕೂಡಲೆ ಕ್ರಮ ಆಗಬೇಕೆಂದು ಕಾಂಗ್ರೆಸ್ ದೂರು ನೀಡಿದೆ.

ಇನ್ನು ಈ ಬಗ್ಗೆ ಬಿಕೆ ಹರಿಪ್ರಸಾದ್ ಟ್ವೀಟ್ ಮಾಡಿ ಪೋಸ್ಟ್ ಹಂಚಿಕೊಂಡಿದ್ದಾರೆ. ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕೋಮು ಗಲಭೆ ಸೃಷ್ಟಿಸಿ, ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸಕ್ಕೆ ಬಿಜೆಪಿ ಪಕ್ಷ ತನ್ನ ಸಹೋದರ ಸಂಘಟನೆಗಳಿಗೆ ಅಣಿಗೊಳಿಸುತ್ತಿರುವುದು ಬಹಿರಂಗವಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button