ಮೋದಿ ಉಪನಾಮ ಪ್ರಕರಣ: ರಾಹುಲ್ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ

ನವದೆಹಲಿ: ಮೋದಿ ಉಪನಾಮ ಪ್ರಕರಣದಲ್ಲಿ ದೋಷಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುಜರಾತ್‌ನ ಸೂರತ್ ನ್ಯಾಯಾಲಯವು ತಮಗೆ ವಿಧಿಸಿರುವ ಎರಡು ವರ್ಷಗಳ ಜೈಲು ಶಿಕ್ಷೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸಮ್ಮತಿಸಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಲ್ಲಿಸಿರುವ ಮೇಲ್ಮನವಿಯನ್ನು ಜುಲೈ 21 ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಗೆ ನೀಡಿದೆ.

ಮಂಗಳವಾರ ಸಿಜೆಐ ಡಿವೈ ಚಂದ್ರಚೂಡ್ ಅವರ ಎದುರು ಮಾನಹಾನಿ ಪ್ರಕರಣದ ಶಿಕ್ಷೆ ವಿರುದ್ಧದ ಮೇಲ್ಮನವಿ ಅರ್ಜಿ ಪರಿಶೀಲನೆಗೆ ಬಂದಿತ್ತು. ಈ ಅರ್ಜಿ ಕುರಿತ ವಿಚಾರಣೆಯನ್ನು ಸಿಜೆಐ ಚಂದ್ರಚೂಡ್ ಅವರು ಜುಲೈ 21ಕ್ಕೆ ನಡೆಸಲು ನಿಗದಿಪಡಿಸಿದರು.

ಗಮನಾರ್ಹ ಸಂಗತಿಯೆಂದರೆ, ಮೋದಿ ಉಪನಾಮದ ಬಗ್ಗೆ ಕಾಮೆಂಟ್ ಮಾಡಿದ್ದಕ್ಕಾಗಿ ಗುಜರಾತ್‌ನ ಸೂರತ್ ನ್ಯಾಯಾಲಯವು ಮಾನನಷ್ಟ ಆರೋಪದಲ್ಲಿ ರಾಹುಲ್ ಗಾಂಧಿಯನ್ನು ತಪ್ಪಿತಸ್ಥರೆಂದು ಘೋಷಿಸಿತು ಮತ್ತು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಈ ಪ್ರಕರಣದಲ್ಲಿ ಗುಜರಾತ್ ಹೈಕೋರ್ಟ್‌ನಿಂದಲೂ ಅವರಿಗೆ ಪರಿಹಾರ ಸಿಕ್ಕಿಲ್ಲ. ಈ ನಿರ್ಧಾರದ ವಿರುದ್ಧ ಇದೀಗ ರಾಹುಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

Latest Indian news

Popular Stories