ರಾಯಚೂರು: ಪ್ರತಿ ದಿನ ಕಿ.ಲೋ ಮೀಟರ್ ಗಟ್ಟಲೆ ನಡೆದುಕೊಂಡು ಹೋಗುತ್ತಿದ್ದ 11 ವಿದ್ಯಾರ್ಥಿಗಳಿಗೆ ಸೈಕಲ್ ದಾನ ಮಾಡಿದ ಕೂಲಿ ಕಾರ್ಮಿಕ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮಲ್ಕಂದಿನ್ನಿ ಗ್ರಾಮದ ಕೂಲಿ ಕಾರ್ಮಿಕನಾಗಿರುವ ಆಂಜನೇಯ ಎಂಬುವರು ತಮ್ಮ ಗ್ರಾಮದ ಮಕ್ಕಳು ಶಾಲೆಗೆ ಹೋಗಲು ಅನುಕೂಲವಾಗಲೆಂದು ಸೈಕಲ್​ ದಾನ ಮಾಡಿದ್ದಾರೆ. ಆಂಜನೇಯ ಅವರ ಈ ಕಾರ್ಯಕ್ಕೆ ಸಾವರ್ಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಲ್ಕಂದಿನ್ನಿ ಗ್ರಾಮದ ಕೂಲಿ ಕಾರ್ಮಿಕನಾಗಿರುವ ಆಂಜನೇಯ ಎಂಬುವರು ಕೂಲಿ ಹಣದಿಂದ ತಮ್ಮ ಸ್ವಗ್ರಾಮದ 8ನೇ ತರಗತಿಯ 11 ವಿದ್ಯಾರ್ಥಿಗಳಿಗೆ ಹೀರೊ ಸೈಕಲ್‌ಗಳನ್ನು (Cycle) ಕೊಡಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ

ದೇವದುರ್ಗ ತಾಲ್ಲೂಕಿನ ಮಲ್ಕಂದಿನ್ನಿ ಗ್ರಾಮದಲ್ಲಿ ಪ್ರೌಢಶಾಲೆ ಇಲ್ಲದಿರುವುದರಿಂದ ಪ್ರೌಢ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಸುಮಾರು 5 ಕಿ.ಮೀ. ದೂರದಲ್ಲಿರುವ ಹೇಮನೂರಿಗೆ ಕಾಲ್ನಡಿಗೆ ಮೂಲಕ ಹೋಗುತ್ತಾರೆ. ಪ್ರತಿದಿನ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಆಂಜನೇಯ, ನಿತ್ಯ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳನ್ನು ಗಮನಿಸುತ್ತಿದ್ದರು. ಕೊನೆಗೆ 11 ಸೈಕಲ್ ಖರೀದಿಸಿ ಶಾಲೆಗೆ ತೆರಳಿ ಮುಖ್ಯಶಿಕ್ಷಕರು ಹಾಗೂ ಸಹ ಶಿಕ್ಷಕರ ಸಮ್ಮುಖದಲ್ಲಿ ವಿದ್ಯಾರ್ಥಿಗಳಿಗೆ ನೀಡಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Latest Indian news

Popular Stories