ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ ನಿರೀಕ್ಷೆ

ಬೆಂಗಳೂರು: ಕರ್ನಾಟಕದ ಕಲಬುರಗಿ, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಕಡೆ ಭಾನುವಾರ ಉತ್ತಮ ಮಳೆಯಾಗಿದ್ದು, ಸೋಮವಾರವೂ ಮುಂದುವರಿಯಲಿದೆ. ಅಲ್ಲದೇ ಮಂಗಳವಾರವೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ

. ಕರಾವಳಿಯ ಕೆಲವು ಕಡೆಗಳಲ್ಲಿ ಸೋಮವಾರ ಮಳೆ ನಿರೀಕ್ಷಿಸಲಾಗಿದೆ. ಅದೇ ರೀತಿ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳ ಕೆಲವು ಕಡೆ, ದಕ್ಷಿಣ ಒಳನಾಡಿನಲ್ಲಿ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸೋಮವಾರ ಮಳೆಯಾಗಲಿದೆ.

ಮಂಗಳವಾರವೂ ಕರಾವಳಿಯ ಬಹುತೇಕ ಕಡೆಗಳಲ್ಲಿ ಮಳೆ ಬೀಳುವ ಮುನ್ಸೂಚನೆಯಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ಮಳೆಯಿದೆ.

ಅದೇ ರೀತಿ ನೈರುತ್ಯ ಮುಂಗಾರು ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದೆ. ಕೊಡಗಿನ ಭಾಗಮಂಡಲದಲ್ಲೂ ಬಹಳ ದಿನಗಳ ನಂತರ ಒಂದು ಸೆ.ಮಿ. ಮಳೆಯಾಗಿರುವ ವರದಿಯಾಗಿದೆ. ಕಲಬುರಗಿ ಇಡೀ ಜಿಲ್ಲೆಯಲ್ಲಿ ಮಳೆ ಸುರಿದಿದೆ. ಕೆಲವು ಕಡೆ ಅನಾಹುತಗಳೂ ಆಗಿವೆ.

ಮುಂದಿನ ನಲವತ್ತೆಂಟು ಗಂಟೆಗಳಲ್ಲಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.

ಮುಂದಿನ ಇಪ್ಪತ್ನಾಲ್ಕು ಹಾಗೂ ನಲವತ್ತೆಂಟು ಗಂಟೆಗಳ ಹವಾಮಾನ ವರದಿಯ ವಿವರವನ್ನು ಭಾರತೀಯ ಹವಾಮಾನ ಇಲಾಖೆ( IMD) ಬಿಡುಗಡೆ ಮಾಡಿದೆ.

ಇಲಾಖೆಯ ವರದಿ ಪ್ರಕಾರ ವಿಶೇಷವಾಗಿ ಬಾಗಲಕೋಟೆ, ಬೆಳಗಾವಿ, ವಿಜಯಪುರ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನ ಕೆಲವು ಕಡಗಳಲ್ಲಿ ಗುಡುಕು ಮಿಂಚಿನ ಸಾಧ್ಯತೆಯೂ ಇದೆ.

ಮುಂದಿನ ಇಪ್ಪತ್ನಾಲ್ಕು ಗಂಟೆಗಳಲ್ಲಿ ಕಲಬುರಗಿ, ಯಾದಗಿರಿ, ಬಾಗಲಕೋಟೆ, ಬೆಳಗಾವಿ,. ಬೀದರ್‌, ವಿಜಯಪುರ ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರೀ ಮಳೆಯಾಗುವ ಸಾಧ್ಯತೆಗಳು ದಟ್ಟವಾಗಿವೆ.

ಮುಂದಿನ ಇಪ್ಪತ್ನಾಲ್ಕು ಗಂಟೆಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

Latest Indian news

Popular Stories