ಕರಾವಳಿಯಲ್ಲಿ ಆರಂಭಗೊಂಡ ಬಿರುಸಿನ ಮಳೆ – ಜೂನ್ 2 ವರೆಗೆ ಭಾರೀ ಮಳೆ ಸಾಧ್ಯತೆ

ಉಡುಪಿ: ಕರಾವಳಿಯಲ್ಲಿ ಹವಾಮಾನ ಇಲಾಖೆಯ ವರದಿಯಂತೆ ಬೆಳ್ಳಂಬೆಳಿಗ್ಗೆ ಬಿರುಸಿನ ಮಳೆ ಆರಂಭಗೊಂಡಿದೆ. ಸಿಡಿಲು-ಮಿಂಚಿನಿಂದ ಕೂಡಿದ್ದ ಮಳೆಯು ಬಿಸಿಲಿನ ಬೇಗೆಯಿಂದ ಬೆಸೆತ್ತಿದ್ದ ಜನರಿಗೆ ತಂಪು ನೀಡಿದೆ.

ಮೇ. 30 ರಿಂದ ಜೂನ್ 1 ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ರಾಮನಗರ, ಚಾಮರಾಜನಗರ ಜಿಲ್ಲೆಗಳಿಗೆ ಮೇ 31 ಹಾಗೂ ಜೂನ್ 1 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಚಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Latest Indian news

Popular Stories