ರಾಜ್ಯದ ಹಲವೆಡೆ ಸುರಿದ ಮಳೆ: ಮುಂದಿನ ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಯಲ್ಲಿ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಕಳೆದ ಒಂದು ವಾರದಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿತ್ತು, ಆದರೆ ಇಂದು (ಶನಿವಾರ) ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಮಳೆಯಾಗುತ್ತಿದೆ.ಶನಿವಾರ ಚಿಕ್ಕಮಗಳೂರು, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುತ್ತಿದೆ.

ತಿಂಗಳ ಅಂತ್ಯದ ವೇಳೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ವಾರಾಂತ್ಯದಲ್ಲಿ ತಂಪೆರೆದ ಮಳೆಕೊಡಗು ಜಿಲ್ಲೆಯ ಸೋಮವಾರ ಪೇಟೆಯ ಉತ್ತರ ಭಾಗದ ಬೆಟ್ಟದಳ್ಳಿ, ಹೆಗ್ಗುಳ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮಳೆಯಾಗಿದೆ. ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹಲವು ಭಾಗಗಳಲ್ಲಿ ಒಂದೂವರೆ ಗಂಟೆಗಳಿಗೂ ಹೆಚ್ಚಿನ ಕಾಲ ಮಳೆ ಸುರಿದಿದ್ದು, ಬಿಸಿಲಿನಿಂದ ಕಾದಿದ್ದ ಭೂಮಿ ತಂಪಾಗಿದೆ.ಚಿಕ್ಕಮಗಳೂರು, ಕೊಡಗು ಜಿಲ್ಲೆಯ ಘಟ್ಟಪ್ರದೇಶಗಳಲ್ಲಿ ಮಳೆಯಾಗುತ್ತಿರುವುದು ನೆಮ್ಮದಿ ತಂದಿದೆ. ಕೊಡಗು ಜಿಲ್ಲೆಯ ಜಂಬೂರು, ನಾಪೊಕ್ಲು, ವಿರಾಜಪೇಟೆ, ಪೊನ್ನಂಪೇಟೆ, ಮಡಿಕೇರಿ, ಪೆರಿಯಾಪಟ್ಟಣ, ತಿತಿಮತಿ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಾಗಿದೆ.

ಮೈಸೂರು ಜಿಲ್ಲೆಯ ಕೃಷ್ಣರಾಜನಗರ, ಸಾಲಿಗ್ರಾಮ, ಹುಣಸೂರು ಸೇರಿದಂತೆ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಿದೆ. ಇನ್ನೂ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದು, ಶನಿವಾರ ರಾತ್ರಿ ಮತ್ತು ಭಾನುವಾರ ಮಳೆಯಾಗುವ ಸಾಧ್ಯತೆ ಇದೆ.ಚಿಕ್ಕಮಗಳೂರು ಜಿಲ್ಲೆಯಲ್ಲಿ ಉತ್ತಮ ಮಳೆಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಕಾಫಿ ಬೆಳೆಗಾರರು ನಿಟ್ಟುಸಿರು ಬಿಡುವಂತಾಗಿದೆ. ಶನಿವಾರ ಕೂಡ ಶೃಂಗೇರಿಯಲ್ಲಿ ಉತ್ತಮ ಮಳೆಯಾಗಿದೆ. ಮೂಡಿಗೆರೆಯಲ್ಲೂ ಉತ್ತಮ ಮಳೆಯಾಗುತ್ತಿದ್ದು, ಹೇಮಾವತಿ ಜಲಾನಯನ ಪ್ರದೇಶದಲ್ಲಿ ವರ್ಷದ ಮೊದಲ ಮಳೆಯಾಗಿದೆ.ಧಾರವಾಡ ಜಿಲ್ಲೆಯಲ್ಲಿ ಮೊದಲ ಮಳೆಇನ್ನು ಧಾರವಾಡ ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆಯಾಗಿದೆ.

Latest Indian news

Popular Stories