Raja Singh arrested: ವಿವಾದಿತ ಭಾಷಣಕಾರ, ಬಿಜೆಪಿ ಮುಖಂಡ ರಾಜಾಸಿಂಗ್ ಬಂಧನ

ಹೈದರಾಬಾದ್: ತೆಲಂಗಾಣ ಬಿಜೆಪಿ ವಿವಾದಿತ ಮುಖಂಡ ಶಾಸಕ ರಾಜಾಸಿಂಗ್ ರನ್ನು ತೆಲಂಗಾಣ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಗೋಶಾಮಹಲ್ ಬಿಜೆಪಿ ಶಾಸಕ ರಾಜಾ ಸಿಂಗ್ ಅವರನ್ನು ಪೊಲೀಸರು ಬಂಧಿಸಿಜದ್ದು, ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಮೇದಕ್‌ ಜಿಲ್ಲೆಯಲ್ಲಿ ನಡೆದ ಗಲಭೆ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಶಾಸಕ ರಾಜಾಸಿಂಗ್‌ರನ್ನು ಮೊದಲೇ ಬಂಧಿಸಲಾಗಿದೆ. ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಮಿಯಾಪುರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿಸಿದ್ದಾರೆ.

Latest Indian news

Popular Stories