ಅಯೋಧ್ಯೆ: ಉ. ಪ್ರದೇಶದ ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕಾರ್ಯ ಶೇ.60ರಷ್ಟು ಪೂರ್ಣಗೊಂಡಿದೆ. 2024ರ ಮಕರ ಸಂಕ್ರಾಂತಿ ಹಬ್ಬದಂದು ಶ್ರೀ ರಾಮನ ವಿಗ್ರಹ ಪ್ರತಿಷ್ಠಾಪಿಸಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಶುಕ್ರವಾರ ತಿಳಿಸಿದೆ.
ಈ ಕುರಿತು ಮಾಹಿತಿ ನೀಡಿದ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ “ದೇಗುಲದ ಮೊದಲ ಹಂತಸ್ತಿನ ನಿರ್ಮಾಣ ಕಾರ್ಯವು ಅಕ್ಟೋಬರ್‌ಗೆ ಪೂರ್ಣಗೊಳ್ಳಲಿದೆ. ದೇಗುಲದ ಗರ್ಭಗುಡಿಯಲ್ಲಿ ಪ್ರಭು ಶ್ರೀರಾಮನ ವಿಗ್ರಹವನ್ನು 2024ರ ಮಕರ ಸಂಕ್ರಾಂತಿ ಹಬ್ಬದಂದು ಪ್ರತಿಷ್ಠಾಪಿಸಲಾಗುವುದು,’ ಎಂದು ವಿವರಿಸಿದರು.