Featured StoryState News

ಎಪಿಎಲ್, ಬಿಪಿಎಲ್ ಎಲ್ಲ ಮಹಿಳೆಯರಿಗೂ ಉಚಿತ ಬಸ್ ಪಯಣ – ನುಡಿದಂತೆ ನಡೆದ ಕಾಂಗ್ರೆಸ್

ಬೆಂಗಳೂರು: ಕಾಂಗ್ರೆಸ್​ ಸರ್ಕಾರದ 5 ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ (Womens) ಉಚಿತ ಬಸ್ ಪಾಸ್ (Free Bus Pass) ವಿತರಣೆ ಸಂಬಂಧ ಇಂದು (ಮೇ.30) ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ (Ramlinga Reddy) ನಾಲ್ಕು ನಿಗಮಗಳ ವ್ಯವಸ್ಥಾಪಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ನಮ್ಮ ಪ್ರಣಾಳಿಕೆಯಲ್ಲಿ APL, BPL ಕಾರ್ಡ್​ದಾರರು ಎಂದು ಹೇಳಿಲ್ಲ. ಹಾಗಾಗಿ ರಾಜ್ಯಾದ್ಯಂತ ಎಲ್ಲಾ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಘೋಷಣೆ ಮಾಡಿದರು. ಇದರೊಂದಿಗೆ ಕಾಂಗ್ರೆಸ್​ನ 5 ಗ್ಯಾರೆಂಟಿಗಳಲ್ಲಿ ಒಂದು ಈಡೇರಿದಂತಾಗಿದೆ.

ಶಾಂತಿನಗರದ ಕೆಎಸ್​ಆರ್​ಟಿಸಿ ಕಚೇರಿಯಲ್ಲಿ ಸಭೆ ನಡೆಸಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸಾರಿಗೆ ನಿಗಮಗಳ ಎಂಡಿಗಳ ಜೊತೆಗೆ ಚರ್ಚೆ ಮಾಡಿದ್ದೇನೆ. ಇಂದಿನ ಸಭೆಯಲ್ಲಿ ಸಾಧಕ ಬಾಧಕಗಳ ಬಗ್ಗೆ ಸಮಾಲೋಚನೆ ನಡೆಸಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಭೆಯ ವರದಿ ಸಲ್ಲಿಸುತ್ತೇವೆ. ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಜೊತೆ ನಿನ್ನೆ (ಮೇ.29) ಸಿಎಂ ಸಿದ್ದರಾಮಯ್ಯನವರು ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿಸಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button