Featured StoryState News

ರಾಮೇಶ್ವರ ಕೆಫೆ ಸ್ಪೋಟ ಪ್ರಕರಣ: ತೀರ್ಥಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತ ಎನ್‌ಐಎ ವಶಕ್ಕೆ

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಬಳಿಕ ಆರೋಪಿಗಾಗಿ ಪೊಲೀಸರು ತಲೆಕೆಡಿಸಿಕೊಂಡು ಶೋಧಕಾರ್ಯ ಕೈಗೊಂಡಿದ್ದು, ಮತ್ತೊಂದೆಡೆ ಎನ್‌ಐಎ ಆರೋಪಿಯನ್ನು ಹುಡುಕಿಕೊಟ್ಟವರಿಗೆ ನಗದು ಬಹುಮಾನವನ್ನು ಕೊಡುವುದಾಗಿ ಘೋಷಣೆಯನ್ನೂ ಮಾಡಿತ್ತು. ಇದೀಗ ಇಂದು ಈ ಪ್ರಕರಣ ಸಂಬಂಧ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇಂದು ತೀರ್ಥಹಳ್ಳಿಯಲ್ಲಿ ಬಿಜೆಪಿ ‌ಕಾರ್ಯಕರ್ತ ಸಾಯಿಪ್ರಸಾದ್‌ ಎಂಬ ಯುವಕನನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಹಿಂದಿನ ವಾರ ತೀರ್ಥಹಳ್ಳಿಯಲ್ಲಿ ಇಬ್ಬರು ಯುವಕರ ಮನೆ ಮತ್ತು ಮೊಬೈಲ್ ಅಂಗಡಿ ಮೇಲೆ ದಾಳಿ ನಡೆಸಿ ಎನ್‌ಐಎ ಶೋಧಕಾರ್ಯ ನಡೆಸಿದ್ದು, ಈ ವೇಳೆ ಇಬ್ಬರು ಯುವಕರ ಜೊತೆ ಸಾಯಿ ಪ್ರಸಾದ್ ಸಂಪರ್ಕದಲ್ಲಿದ್ದ ಎನ್ನುವ ಮಾಹಿತಿಯನ್ನು ತಿಳಿದುಬಂದಿದ್ದು, ಈ ಹಿನ್ನೆಲೆ ಆತನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ.

ಇನ್ನು ಈ ಬಗ್ಗೆ ಟ್ವೀಟ್‌ನಲ್ಲಿ ಪ್ರತಿಕ್ರಿಯಿಸಿದ ಸಚಿವ ದಿನೇಶ್‌ ಗುಂಡೂರಾವ್‌ ಅವರು, “ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಮುಖಂಡ ಸಾಯಿಪ್ರಸಾದ್‌ನನ್ನು ರಾಷ್ಟ್ರೀಯ ತನಿಖಾ ದಳದವರು ವಶಕ್ಕೆ ಪಡೆದಿದ್ದಾರೆ. ಸ್ಫೋಟಕ್ಕೆ ನಮ್ಮ ಸರ್ಕಾರವೇ ಕಾರಣ ಅನ್ನೋವಂತೆ ಮಾತಾನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ?,” ಎಂದು ಪ್ರಶ್ನಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button