Featured StoryState News

ರಾಮೇಶ್ವರ ಕೆಫೆ ಸ್ಪೋಟ ಪ್ರಕರಣ: ಇಬ್ಬರ ಬಂಧನ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ (Rameshwaram cafe) ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿದಳು ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಶಂಕಿತ ಮುಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮತೀನ್ ಅಹಮದ್ ತಾಹಾರನ್ನು ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದಲ್ಲಿ ಬಂಧಿಸಲಾಗಿದೆ ಎಂದು ಎನ್ಎಐ ಮೂಲಗಳು ತಿಳಿಸಿವೆ. ‘ಸಾಕ್ಷಿ ಸಂಗ್ರಹಕ್ಕಾಗಿ ಆರೋಪಿಗಳ ಸಹಪಾಠಿಗಳು, ಸ್ನೇಹಿತರು, ಬಂಧಿತ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ.

ಐಇಡಿ ತಂದಿದ್ದ ಮುಸಾವೀರ್ ಹಾಗೂ ಸ್ಫೋಟಕ್ಕೆ ರೂಪುರೇಷೆ ಸಿದ್ಧಪಡಿಸಿದ ಅಬ್ದುಲ್ ಮತೀನ್ ತಾಹ ಇಬ್ಬರು ತೀರ್ಥಹಳ್ಳಿಯವರು ಎಂದು ಹೇಳಲಾಗಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ಇವರಿಗೆ ಸಹಾಯ ಮಾಡಿದ್ದ ಮುಜಾಮೀಲ್ ಷರೀಫ್ ಎಂಬಾತನನ್ನು ಕೂಡ ಬಂಧಿಸಲಾಗಿದೆ ಎಂದು ಎನ್ಐಎ ಮೂಲಗಳು ತಿಳಿಸಿವೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button