ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ: ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ

ಬೆಂಗಳೂರು:ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿದ ಒಂದು ದಿನದ ನಂತರ, ಕರ್ನಾಟಕದ ರಾಜಧಾನಿಯ ವೈಟ್‌ಫೀಲ್ಡ್ ಪ್ರದೇಶದ ಕೆಫೆಯ ಆವರಣದಲ್ಲಿ ವ್ಯಕ್ತಿಯೊಬ್ಬರು ಚೀಲವನ್ನು ಹೊತ್ತುಕೊಂಡು ಹೋಗುತ್ತಿರುವುದನ್ನು ತೋರಿಸುವ ಸಿಸಿಟಿವಿ ದೃಶ್ಯಾವಳಿಗಳು ಹೊರಬಿದ್ದಿವೆ. ಸಿಸಿಟಿವಿಯಲ್ಲಿರುವ ಶಂಕಿತ ಚಿತ್ರವನ್ನು ಎನ್.ಡಿ.ಟಿವಿ ವರದಿ ಮಾಡಿದೆ.

ಪೊಲೀಸರ ಪ್ರಕಾರ,ಶಂಕಿತ ಈ ಚೀಲವನ್ನು ಕೆಫೆಯಲ್ಲಿ ಇರಿಸಿ ನಂತರ ಸ್ಫೋಟ ಸಂಭವಿಸುವ ಮೊದಲು ಹೊರಟುಹೋದನು. ಶಂಕಿತನ ಜೊತೆಗೆ ಕಾಣಿಸಿಕೊಂಡಿದ್ದ ಮತ್ತೊಬ್ಬ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಕುರಿತು ರಾಜ್ಯ ಮಾಧ್ಯಮಗಳು ವರದಿ ಮಾಡಿವೆ.

Latest Indian news

Popular Stories