ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಆರೋಪ ಪಟ್ಟಿ: ರಾಜ್ಯ ಬಿಜೆಪಿ ಕಚೇರಿಯ ಭದ್ರತೆಯಲ್ಲಿ ಮತ್ತಷ್ಟು ಹೆಚ್ಚಳ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಸಲ್ಲಿಸಿರುವ ಚಾರ್ಜ್‌ಶೀಟ್ ನಲ್ಲಿ ರಾಜ್ಯ ಬಿಜೆಪಿ ಕಚೇರಿ ಮೇಲೆ ಆರೋಪಿಗಳು ದಾಳಿ ನಡೆಸಲು ಯೋಜಿಸಿದ್ದರು ಎಂಬ ಉಲ್ಲೇಖ ಮಾಡಿದ ನಂತರ ಇತ್ತ ಮಲ್ಲೇಶ್ವರ ಬಿಜೆಪಿ ಕಚೇರಿಯಲ್ಲಿ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.

ಗೃಹ ಇಲಾಖೆ ಸೂಚನೆ ಮೇರೆಗೆ ಮಲ್ಲೇಶ್ವರ ಬಿಜೆಪಿ ಕಚೇರಿಗೆ ಭದ್ರತೆಯನ್ನು ಹೆಚ್ಚಳ ಮಾಡಲಾಗಿದೆ. ನಗರದಲ್ಲಿರುವ ಬಿಜೆಪಿ ಕಚೇರಿಗೆ ಮೆಟಲ್ ಡಿಟೆಕ್ಟರ್, ಬಿಗಿ ತಪಾಸಣೆ, ಹೆಚ್ಚುವರಿಯಾಗಿ ಪೊಲೀಸರ ನಿಯೋಜನೆ ಮಾಡಲಾಗಿದೆ.

ಕಚೇರಿ ಪ್ರವೇಶಿಸುವವರು ಈ ಮೆಟಲ್ ಡಿಟೆಕ್ಟರ್ ಮೂಲಕವೇ ಪ್ರವೇಶಿಸುವಂತೆ ಸೂಚಿಸಲಾಗಿದೆ. ಜೊತೆಗೆ ನಿತ್ಯ ಮಲ್ಲೇಶ್ವರ ಪೊಲೀಸ್ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ನಿಗಾ ವಹಿಸುವಂತೆಯೂ ಸೂಚಿಸಲಾಗಿದೆ.

ಬ್ರೂಕ್‌ ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಿಸಿದ್ದ ಶಂಕಿತ ಉಗ್ರರು ಬಿಜೆಪಿ ರಾಜ್ಯ ಘಟಕದ ಕಚೇರಿಯನ್ನೂ ಗುರಿಯಾಗಿಸಿಕೊಂಡಿದ್ದಾಗಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಜೆಪಿ ಕಚೇರಿಗೆ ಭದ್ರತೆ ಒದಗಿಸಿದ್ದಾರೆ.

Latest Indian news

Popular Stories