ನಾಳೆ ಸಂವಿಧಾನ ಓದು ಕಾರ್ಯಕ್ರಮ

ಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವಾದ ಸೆ. 15ರಂದು ವಿಧಾನಸೌಧದ ಮುಂಭಾಗದಲ್ಲಿರುವ ಮೆಟ್ಟಿಲುಗಳ ಮೇಲೆ ಸಂವಿಧಾನದ ಓದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ| ಎಚ್‌.ಸಿ. ಮಹದೇವಪ್ಪ ಹೇಳಿದರು.

ಶುಕ್ರವಾರ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭ ಸಂವಿಧಾನ ಪೀಠಿಕೆಯ ಬೋಧನೆ ಮತ್ತು ವಾಚನ ನಡೆಯಲಿದೆ ಎಂದರು. ಸಂವಿಧಾನ ಓದು ಕಾರ್ಯಕ್ರಮಕ್ಕಾಗಿ ಪ್ರಪಂಚದಾದ್ಯಂತ 2,27,81,894 ಜನ ಆನ್‌ ಲೈನ್‌ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ. ಎಲ್ಲರೂ ಅವರವರಿರುವ ಜಾಗದಿಂದಲೇ ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಅವರು ಹೇಳಿದರು.

ಹಿಂದಿನ ಸರಕಾರ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆ ಓದಬೇಕೆಂದು ಆದೇಶ ಮಾಡಿತ್ತು. ಕೇವಲ ಆದೇಶ ಮಾಡಿದರೆ ಸಾಲದು, ನಾವು ಅದನ್ನು ಕಡ್ಡಾಯಗೊಳಿಸಿದ್ದೇವೆ. ವ್ಯಾಪಕ ಆಂದೋಲನ ಮಾಡುತ್ತೇವೆ. ಸಿಎಂ ಕಚೇರಿಯಿಂದ ಹಿಡಿದು ಶಾಲೆ, ಕಾಲೇಜು, ಸರಕಾರಿ ಕಚೇರಿಗಳೆಲ್ಲೆ ಡೆ ಕಡ್ಡಾಯವಾಗಿ ಸಂವಿಧಾನದ ಪೀಠಿಕೆ ಓದಬೇಕು ಎಂದು ಮಾಹಿತಿ ನೀಡಿದರು.

Latest Indian news

Popular Stories