ಕಾಂಗ್ರೆಸ್ ಗೆ 15 ಸೀಟು ಕೊಡಲು ಸಿದ್ಧ; ಹಂಚಿಕೆ ಪ್ರಕ್ರಿಯೆ ಮುಗಿದ ಮೇಲೆ ನ್ಯಾಯ್ ಯಾತ್ರೆಯಲ್ಲಿ ಭಾಗಿ: ಅಖಿಲೇಶ್ ಯಾದವ್

ಲಕ್ನೋ: ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ನೊಂದಿಗೆ ಸೀಟು ಹಂಚಿಕೆ ಅಂತಿಮಗೊಳ್ಳುವವರೆಗೆ ಕಾಂಗ್ರೆಸ್‌ನ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸಮಾಜವಾದಿ ಮುಖಂಡ ಅಖಿಲೇಶ್ ಯಾದವ್ ಹೇಳಿದ್ದಾರೆ.

ಎಎನ್‌ಐ ಜೊತೆ ಮಾತನಾಡಿದ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್, ಸೀಟು ಹಂಚಿಕೆ ಸಂಬಂಧಮಾತುಕತೆ ನಡೆಯುತ್ತಿದೆ, ಅವರಿಂದ ಪಟ್ಟಿಗಳು ಬಂದಿವೆ, ನಾವು ಅವರಿಗೂ ಪಟ್ಟಿಯನ್ನು ನೀಡಿದ್ದೇವೆ. ಸೀಟು ಹಂಚಿಕೆ ಮುಗಿದ ಕ್ಷಣ, ಸಮಾಜವಾದಿ ಪಕ್ಷವ ಕಾಂಗ್ರೆಸ್ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಸೇರುತ್ತದೆ ಎಂದಿದ್ದಾರೆ.

ಸಮಾಜವಾದಿ ಪಕ್ಷವು ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ನೊಂದಿಗೆ 15 ಸ್ಥಾನಗಳನ್ನು ಹಂಚಿಕೊಳ್ಳಲು ಸಿದ್ಧವಾಗಿದೆ ಎಂದು ಹೇಳಿದೆ. ಈಗ ಸೀಟು ಹಂಚಿಕೆ ಬಗ್ಗೆ ಕಾಂಗ್ರೆಸ್‌ಗೆ ಬಿಟ್ಟ ವಿಷಯವಾಗಿದೆ.

2019 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಯ್ ಬರೇಲಿಯಲ್ಲಿ ಕೇವಲ ಒಂದು ಸ್ಥಾನವನ್ನು ಗೆದ್ದಿತ್ತು. ಅಮೇಠಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಗಾಂಧಿ ಸೋತಿದ್ದರು. ಆ ಸಮಯದಲ್ಲಿ ಸಮಾಜವಾದಿ ಪಕ್ಷವು ಕಾಂಗ್ರೆಸ್‌ಗೆ ಅಮೇಥಿ ಮತ್ತು ರಾಯ್ ಬರೇಲಿಯಲ್ಲಿ ಸ್ಪರ್ಧಿಸುವುದನ್ನು ತಡೆಯಿತು. ಆದರೆ, ಈ ಬಾರಿ 15 ಸ್ಥಾನಗಳನ್ನು ಕಾಂಗ್ರೆಸ್‌ಗೆ ನೀಡುವುದಾಗಿ ಪಕ್ಷ ದೃಢ ನಿಲುವು ತಳೆದಿದೆ ಎನ್ನಲಾಗಿದೆ.

Latest Indian news

Popular Stories