ತಾಯಿಯ ಗೌರವಕ್ಕಾಗಿ ಸಾವಿರ ಉದ್ಯೋಗಗಳನ್ನು ಕಳೆದುಕೊಳ್ಳಲು ತಯಾರಿದ್ದೇನೆ: ಕಂಗನಾಳಿಗೆ ಕಪಾಳಮೋಕ್ಷ ಮಾಡಿದ್ದ ಯೋಧೆ ಕುಲ್ವಿಂದರ್ ಕೌರ್

ಚಂಡೀಗಢ: ನನ್ನ ತಾಯಿಯ ಗೌರವಕ್ಕಾಗಿ ಸಾವಿರ ಉದ್ಯೋಗಗಳನ್ನು ಕಳೆದುಕೊಳ್ಳಲು ತಯಾರಿದ್ದೇನೆ ಎಂದು ನೂತನ ಸಂಸದೆ ಕಂಗನಾ ರಣಾವತ್‍ಗೆ ( Kangana Ranaut) ಕಪಾಳಮೋಕ್ಷ ಮಾಡಿದ್ದ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಕುಲ್ವಿಂದರ್ ಕೌರ್ (Kulwinder Kaur) ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕುಲ್ವಿಂದರ್ ಕೌರ್ ಅವರನ್ನು ಕೆಲಸದಿಂದ ಅಮಾನತು ಮಾಡಿ, ಬಂಧಿಸಲಾಗಿದೆ. ಇದಕ್ಕೂ ಮುನ್ನ ಅವರು, ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಈ ಕೆಲಸವನ್ನು ಕಳೆದುಕೊಳ್ಳುವ ಭಯವಿಲ್ಲ. ನಾನು ಸಿದ್ಧಳಿದ್ದೇನೆ, ನನ್ನ ತಾಯಿಯ ಗೌರವಕ್ಕಾಗಿ ಇಂತಹ ಸಾವಿರಾರು ಉದ್ಯೋಗಗಳನ್ನು ಕಳೆದುಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ಕಂಗನಾ ರಣಾವತ್ ಅವರು ಗುರುವಾರ ಚಂಡೀಗಢ ವಿಮಾನ ನಿಲ್ದಾಣಕ್ಕೆ (Chandigarh Airport) ಬಂದಿದ್ದಾಗ, ವಿಮಾನ ನಿಲ್ದಾಣದಲ್ಲಿ ಕೌರ್ ಅವರು ಕಪಾಳಮೋಕ್ಷ ಮಾಡಿದ್ದರು.

Latest Indian news

Popular Stories