ಆಲಮಟ್ಟಿ ಜಲಾಶಯದ ಹಿನ್ನೀರು ಅನ್ಯ ಬಳಕೆ ಮಾಡದಿರಲು ಮನವಿ

ವಿಜಯಪುರ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇರುವುದರಿಂದ ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಅಳವಡಿಸಲಾಗಿರುವ ಮೋಟಾರ್ ಪಂಪಗಳನ್ನು ತೆರವುಗೊಳಿಸಬೇಕು ಎಂದು ಕೃಷ್ಣ ಭಾಗ್ಯ ಜಲ ನಿಗಮ ಅಣೆಕಟ್ಟು ವಿಭಾಗದ ಕಾರ್ಯ ನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಮಳೆಯ ಕೊರತೆಯಿಂದ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಇಲ್ಲ. ಪ್ರಸ್ತುತ ಜಲಾಶಯದಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿದಿದ್ದು, ಮುಂಬರುವ ಜೂನ್ ತಿಂಗಳ ಅಂತ್ಯದವರೆಗೆ ಆಲಮಟ್ಟಿ ಜಲಾಶಯ ಅವಲಂಬಿತ ನಗರ, ಪಟ್ಟಣ, ಹಾಗೂ ಗ್ರಾಮಗಳಿಗೆ ಕುಡಿಯುವ ನೀರನ್ನು ಕಾಯ್ದಿರಿಸಬೇಕಾಗುತ್ತದೆ.

ವಿಪತ್ತು ನಿರ್ವಹಣಾ ಕಾಯ್ದೆ ಜಾರಿಯಾಗಿರುವ ಹಿನ್ನಲೆಯಲ್ಲಿ ಜಲಾಶಯದ ಹಿನ್ನೀರಿನಲ್ಲಿ ಅಳವಡಿಸಲಾಗಿರುವ ಮೋಟಾರ್ ಪಂಪ್ ಸೆಟ್ ಗಳ ಪರವಾನಿಗೆ ಸ್ಥಗಿತಗೊಳಿಸಲಾಗಿದೆ. ಆದ ಕಾರಣ ಹಿನ್ನೀರಿನ ನೀರನ್ನು ಅನ್ಯ ಉದ್ದೇಶಕ್ಕೆ ಬಳಸುವುದು ನಿಷೇಧಿಸಲಾಗಿದೆ. ಸದರಿ ಆದೇಶವನ್ನು ಉಲ್ಲಂಘನೆ ಮಾಡಿದ್ದಾರೆ, ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories