ಐತಿಹಾಸಿಕ ಗೋಳಗುಮ್ಮಟ ವಿಶ್ವಪಾರಂಪರಿಕ ಪಟ್ಟಿ ಸೇರ್ಪಡೆ ಪ್ರಧಾನಿಗೆ ಮನವಿ

WhatsApp Image 2023 09 30 at 3.47.06 PM Featured Story, National, State News, Vijayapura

ವಿಜಯಪುರ: ವಿಜಯಪುರದ ವಿಶ್ವವಿಖ್ಯಾತ ಗೋಳಗುಮ್ಮಟವನ್ನು ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವಂತೆ ಸಂಸದ ರಮೇಶ ಜಿಗಜಿಣಗಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.
ಐತಿಹಾಸಿಕ ವಿಜಯಪುರವು 80ಕ್ಕೂ ಹೆಚ್ಚು ಎಎಸ್ಐ ಸಂರಕ್ಷಿತ ಸ್ಮಾರಕಗಳನ್ನು ಹೊಂದಿದ್ದು, ಅತಿ ಹೆಚ್ಚು ಸ್ಮಾರಕಗಳನ್ನು ಹೊಂದಿರುವ ವಿಜಯಪುರ ಭಾರತದ ಅತಿ ದೊಡ್ಡ ಪ್ರವಾಸಿ ಕೇಂದ್ರವಾಗಿದೆ.
ರೋಮ್ನ ಸೇಂಟ್ ಪೀಟರ್ಸ್ ಬೆಸಿಲಿಕಾದ ನಂತರದ ಗಾತ್ರದಲ್ಲಿ ಇದುವರೆಗೆ ನಿರ್ಮಿಸಲಾದ ಎರಡನೇ ಅತಿದೊಡ್ಡ ಗುಮ್ಮಟವಾಗಿದೆ. ಈ ಗುಮ್ಮಟದಲ್ಲಿ ಪ್ರತಿ ಶಬ್ದವು ಏಳು ಬಾರಿ ಪ್ರತಿಧ್ವನಿಸುತ್ತದೆ.ವಿಶ್ವವಿಖ್ಯಾತ ಗೋಲಗುಮ್ಮಟವನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸುವುದರಿಂದ ಜಿಲ್ಲೆಯ ಪ್ರವಾಸೋದ್ಯಮವು ಅಭಿವೃದ್ದಿ ಹೊಂದಿ, ಸಾವಿರಾರು ಜನರಿಗೆ ನೇರ ಹಾಗೂ ಪರೋಕ್ಷವಾಗಿ ಉದ್ಯೋಗವು ದೊರೆಯಲಿದೆ. ಹೋಟೆಲ್ ಉದ್ಯಮಕ್ಕೆ ಉತ್ತೇಜನ ಸೇರಿದಂತೆ ಪ್ರಮುಖ ಬೆಳೆಗಳಾದ ಲಿಂಬೆ, ದ್ರಾಕ್ಷಿ, ದಾಳಿಂಬೆ ಬೆಳೆಗಳ ರಫ್ತಿಗೆ ಉತ್ತೇಜನ ದೊರೆಯಲಿರುವುದರಿಂದ ವಿಶ್ವವಿಖ್ಯಾತ ಗೋಲಗುಮ್ಮಟವನ್ನು ವಿಶ್ವಪಾರಂಪರಿಕ ಪಟ್ಟಿಗೆ ಸೇರಿಸುವಂತೆ ಅವರು ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.

Latest Indian news

Popular Stories